ದೇಶ

ಮಹಾರಾಷ್ಟ್ರ: ಬಿಜೆಪಿ ನಾಯಕ ರವೀಂದ್ರ ಖರತ್ ಸೇರಿ ನಾಲ್ವರ ಬರ್ಬರ ಹತ್ಯೆ

ಬಿಜೆಪಿ ಮುಖಂಡ ರವೀಂದ್ರ ಖರತ್ ಹಾಗೂ ಅವರ ಕುಟುಂಬದ ನಾಲ್ವರು ಸದಸ್ಯರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಜಲ್ಗಾಂವ್ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಮಹಾರಾಷ್ಟ್ರ: ಬಿಜೆಪಿ ನಾಯಕ ರವೀಂದ್ರ ಖರತ್ ಸೇರಿ ನಾಲ್ವರ ಬರ್ಬರ ಹತ್ಯೆ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಬಿಜೆಪಿ ಮುಖಂಡ ರವೀಂದ್ರ ಖರತ್ ಹಾಗೂ ಅವರ ಕುಟುಂಬದ ನಾಲ್ವರು ಸದಸ್ಯರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಜಲ್ಗಾಂವ್ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. 

ಕಳೆದ ರಾತ್ರಿ 9.30ರ ರವೀಂದ್ರ ಹಾಗೂ ಅವರ ಕುಟುಂಬ ಸದಸ್ಯರು ತಮ್ಮ ನಿವಾಸದಲ್ಲಿದ್ದ ಸಂದರ್ಭದಲ್ಲಿಯೇ ದುಷ್ಕರ್ಮಿಗಳು ಹತ್ಯೆ ಮಾಡಿ, ಸ್ಥಳದಿಂದ ಕಾಲ್ಕಿತ್ತಿದ್ದಾರೆ. 

ಬಿಜೆಪಿ ನಾಯಕ ರವೀಂದ್ರ ಖರತ್, ಸಹೋದರ ಸುನೀಲ್ ಖರತ್, ಪುತ್ರ ರೋಹಿತ್ ಹಾಗೂ ಪ್ರೇಮ್ ಸಾಗರ್, ಗೆಳೆಯ ಸುಮಿತ್ ಫೆಡ್ರೆಯವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಮನೆಯ ಹೊರಾಂಗಣದಲ್ಲಿ ದಾಳಿ ನಡೆಸಿರುವ ದುಷ್ಕರ್ಮಿಗಳು ಇಬ್ಬರನ್ನು ಸ್ಥಳದಲ್ಲಿಯೇ ಹತ್ಯೆ ಮಾಡಿದ್ದಾರೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗದ ಮಧ್ಯೆಯೇ ಸಾವನ್ನಪ್ಪಿದ್ದಾರೆಂದು ತಿಳಿಸಿದ್ದಾರೆ. 

ಹತ್ಯೆಗೆ ದುಷ್ಕರ್ಮಿಗಳು ಗನ್ ಹಾಗೂ ಕೆಲ ಶಸ್ತ್ರಾಗಳಿಂದ ದಾಳಿ ನಡೆಸಿದ್ದು, ಹತ್ಯೆ ಬಳಿಕ ಅವುಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಹತ್ಯೆ ವೈಯಕ್ತಿಕ ದ್ವೇಷದಿಂದ ನಡೆಸಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಸ್ತುತ ಪ್ರಕರಣ ಸಂಬಂಧ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಘಟನೆಯಲ್ಲಿ ದುಷ್ಕರ್ಮಿಗಳಿಗೂ ಕೆಲ ಗಾಯಗಳಾಗಿವೆ ಎಂಬುದು ತನಿಖೆ ವೇಳೆ ತಿಳಿದುಬಂದಿದೆ, ತನಿಖೆ ಮುಂದುವರೆದಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.