ಮುಂದಿನ 50 ವರ್ಷಗಳವರೆಗೂ ಉತ್ತರಪ್ರದೇಶದಲ್ಲಿ ಬಿಜೆಪಿಯದ್ದೇ ಸರ್ಕಾರ: ಕೇಶವ್ ಪ್ರಸಾದ್
ಮುಂದಿನ 50 ವರ್ಷಗಳವರೆಗೂ ಉತ್ತರಪ್ರದೇಶ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಆಡಳಿತ ನಡೆಸಲಿದೆ ಎಂದು ಉತ್ತರಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಅವರು ಸೋಮವಾರ ಹೇಳಿದ್ದಾರೆ.

ಪ್ರಯಾಗ್ರಾಜ್: ಮುಂದಿನ 50 ವರ್ಷಗಳವರೆಗೂ ಉತ್ತರಪ್ರದೇಶ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಆಡಳಿತ ನಡೆಸಲಿದೆ ಎಂದು ಉತ್ತರಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಅವರು ಸೋಮವಾರ ಹೇಳಿದ್ದಾರೆ.
2022ರಲ್ಲಿ ಸರ್ಕಾರ ರಡನೆ ಮಾಡುತ್ತೇನೆಂದು ಹೇಳಿದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಹೇಳಿಕೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಉತ್ತರಪ್ರದೇಶ ಹಾಗೂ ಕೇಂದ್ರದಲ್ಲಿ ಜನ ಪರವಾಗಿ ಕೆಲಸ ಮಾಡುವ ಸರ್ಕಾರಗಳಿವೆ. ಮುಂದಿನ 50 ವರ್ಷಗಳವರೆಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ನಡೆಸಲಿದೆ ಎಂದು ಹೇಳಿದ್ದಾರೆ.
50 ವರ್ಷಗಳವರೆಗೂ ಬಿಜೆಪಿ ಸರ್ಕಾರ ನಡೆಸುವುದರಿಂದ ಅಖಿಲೇಶ್ ಬೇಕಿದ್ದರೆ, 50 ವರ್ಷಗಳಾದ ಬಳಿಕ ಸರ್ಕಾರ ರಚನೆ ಮಾಡಲಿ ಎಂದು ತಿಳಿಸಿದ್ದಾರೆ.
ಈ ಹಿಂದೆ ಹೇಳಿಕೆ ನೀಡಿದ್ದ ಅಖಿಲೇಶ್ ಯಾದವ್ ಅವರು, ಸಮಾಜವಾದಿ ಪಕ್ಷದ ಕುಟುಂಬ ಬೆಳೆದಿದ್ದು, 2022ರಲ್ಲಿ ರಾಜ್ಯದಲ್ಲಿ ಸರ್ಕಾರ ರಚನೆ ಮಾಡುತ್ತೇವೆಂದಿದ್ದರು,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


