ಬಂಧಿತ ಎಲ್ಲಾ ರಾಜಕೀಯ ನಾಯಕರನ್ನು ಬಿಡುಗಡೆಗೊಳಿಸಿ: ಫಾರೂಖ್ ಅಬ್ದುಲ್ಲಾ
ಆರ್ಟಿಕಲ್ 370 ರದ್ಧತಿ ನಂತರ ಬಂಧಿಸಿರುವ ಎಲ್ಲರನ್ನು ಷರತ್ತುರಹಿತವಾಗಿ ಬಿಡುಗಡೆಗೊಳಿಸಬೇಕು ಎಂದು ನ್ಯಾಷನಲ್ ಕಾನ್ಪ್ ರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಒತ್ತಾಯಿಸಿದ್ದಾರೆ.

ಶ್ರೀನಗರ: ಆರ್ಟಿಕಲ್ 370 ರದ್ಧತಿ ನಂತರ ಬಂಧಿಸಿರುವ ಎಲ್ಲರನ್ನು ಷರತ್ತುರಹಿತವಾಗಿ ಬಿಡುಗಡೆಗೊಳಿಸಬೇಕು ಎಂದು ನ್ಯಾಷನಲ್ ಕಾನ್ಪ್ ರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ರಾಜಕೀಯ ಪ್ರಕ್ರಿಯೆಗಳು ಆರಂಭವಾಗಬೇಕಾದರೇ ಬಂಧಿತರನ್ನು ಬಿಡುಗಡೆಗೊಳಿಸಬೇಕೆಂದು ನಿಯೋಗದೊಂದಿಗೆ ತೆರಳಿ ಒತ್ತಾಯಿಸಿದ್ದಾರೆ, ಶಾಂತಿಯುತವಾಗಿ ಪ್ರತಿಭಟಿಸುವ ಮೂಲಕ ರಾಜ್ಯದ ವಿಶೇಷ ಸ್ಥಾನಮಾನ ಮತ್ತು ವಿಭಜನೆಯನ್ನು ರದ್ದುಪಡಿಸುವುದರ ಬಗ್ಗೆ ರಾಜ್ಯದ ಜನರು ತಮ್ಮ ಅಸಮ್ಮತಿಯನ್ನು ವ್ಯಕ್ತಪಡಿಸಿದ್ದಾರೆ ಹೀಗಾಗಿ ಸರ್ಕಾರ ಅವರ ಭಾವನೆಗಳನ್ನು ನಿರ್ಲಕ್ಷ್ಸಿಸಬಾರದು ಎಂದು ಮನವಿ ಮಾಡಿದ್ದಾರೆ.
ಭಾರತ ಸರ್ಕಾರವು ತಕ್ಷಣವೇ ಕ್ರಮಗಳನ್ನು ಕೈಗೊಳ್ಳುವವರೆಗೆ ಯಾವುದೇ ರಾಜಕೀಯ ಪ್ರಕ್ರಿಯೆಗಳು ನಡೆಯುವುದಿಲ್ಲ.
ರಾಜ್ಯದಲ್ಲಿ ಬ್ಲಾಕ್ ಡೆವಲಪ್‌ಮೆಂಟ್ ಕೌನ್ಸಿಲ್ (ಬಿಡಿಸಿ) ಚುನಾವಣೆ ಅಕ್ಟೋಬರ್ 24 ರಂದು ನಡೆಯಲಿದ್ದು, ಅದರ ನಾಯಕರನ್ನು ಬಂಧನದಲ್ಲಿರಿಸಿದರೆ ಈ ಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಎನ್‌ಸಿ ವಕ್ತಾರ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


