ಪುಲ್ವಾಮಾ ಭಯೋತ್ಪಾದಕ ದಾಳಿ ರಕ್ಷಣಾ ವ್ಯವಸ್ಥೆಗೆ ಎಚ್ಚರಿಕೆಯ ಗಂಟೆ: ಐಎಎಫ್ ಮುಖ್ಯಸ್ಥ ಭದೌರಿಯಾ
ರಕ್ಷಣಾ ಸ್ಥಾಪಕ ಕೇಂದ್ರಗಳು ಎಲ್ಲಾ ಸಮಯಗಳಲ್ಲಿಯೂ ಎಚ್ಚರವಾಗಿರಬೇಕು ಎಂಬುದಕ್ಕೆ ಕಳೆದ ಫೆಬ್ರವರಿಯಲ್ಲಿ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಆತ್ಮಹತ್ಯಾ ದಾಳಿ ಎಚ್ಚರಿಕೆಯ ಗಂಟೆಯಾಗಿದೆ ಎಂದು ಭಾರತೀಯ ವಾಯುಪಡೆ ಮುಖ್ಯಸ್ಥ ಆರ್ ಕೆಎಸ್ ಭದೌರಿಯಾ ಹೇಳಿದ್ದಾರೆ.

ನವದೆಹಲಿ: ರಕ್ಷಣಾ ಸ್ಥಾಪಕ ಕೇಂದ್ರಗಳು ಎಲ್ಲಾ ಸಮಯಗಳಲ್ಲಿಯೂ ಎಚ್ಚರವಾಗಿರಬೇಕು ಎಂಬುದಕ್ಕೆ ಕಳೆದ ಫೆಬ್ರವರಿಯಲ್ಲಿ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಆತ್ಮಹತ್ಯಾ ದಾಳಿ ಎಚ್ಚರಿಕೆಯ ಗಂಟೆಯಾಗಿದೆ ಎಂದು ಭಾರತೀಯ ವಾಯುಪಡೆ ಮುಖ್ಯಸ್ಥ ಆರ್ ಕೆಎಸ್ ಭದೌರಿಯಾ ಹೇಳಿದ್ದಾರೆ.
ದೆಹಲಿ ಸಮೀಪ ಹಿಂದೊನ್ ವಾಯುನೆಲೆಯಲ್ಲಿ 87ನೇ ವಾಯುಸೇನಾ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದು ನೆರೆದೇಶಗಳಲ್ಲಿನ ಭದ್ರತಾ ವ್ಯವಸ್ಥೆ ಗಂಭೀರವಾದ ಆತಂಕಕಾರಿ ವಿಷಯವಾಗಿದೆ. ಪುಲ್ವಾಮಾ ದಾಳಿಯು ಭದ್ರತಾ ವ್ಯವಸ್ಥೆ ಮೇಲೆ ನಿರಂತರವಾಗಿ ಬೆದರಿಕೆಯಿದೆ ಎಂಬುದನ್ನು ನೆನಪಿಸುತ್ತದೆ. ಇದಕ್ಕೆ ಪ್ರತಿಯಾಗಿ ಭಾರತ ನಂತರ ಕೈಗೊಂಡ ವಾಯುದಾಳಿ ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ಸರ್ಕಾರದ ನೀತಿಯಲ್ಲಿ ಪ್ರಮುಖ ಬದಲಾವಣೆಯಾಗಿದ್ದನ್ನು ಗುರುತಿಸುತ್ತದೆ. ಬಾಲಾಕೋಟ್ ವಾಯುದಾಳಿ ಭಯೋತ್ಪಾದನೆಯ ತಪ್ಪಿತಸ್ಥರನ್ನು ಮಟ್ಟಹಾಕಲು ನಮ್ಮ ರಾಜಕೀಯ ನಾಯಕತ್ವ ತೆಗೆದುಕೊಂಡ ಪ್ರಮುಖ ನಿರ್ಧಾರವಾಗಿತ್ತು. ಭಯೋತ್ಪಾದಕ ದಾಳಿಯನ್ನು ನಿಭಾಯಿಸುವ ಸರ್ಕಾರದ ನೀತಿಯಲ್ಲಿ ಪ್ರಮುಖ ಬದಲಾವಣೆಯಾಗಿರುವುದು ಕಂಡುಬರುತ್ತಿದೆ ಎಂದು ಅವರು ಹೇಳಿದರು.
ಭಯೋತ್ಪಾದನೆಯ ದುಷ್ಕರ್ಮಿಗಳನ್ನು ಶಿಕ್ಷಿಸಲು ರಾಜಕೀಯ ನಾಯಕತ್ವದ ಸಂಕಲ್ಪವು ಬಾಲಕೋಟ್ ವಾಯುದಾಳಿಯ ಕಾರ್ಯತಂತ್ರದ ಪ್ರಸ್ತುತತೆಯಾಗಿದೆ ಎಂದು ಏರ್ ಚೀಫ್ ಮಾರ್ಷಲ್ ಆರ್ ಕೆ ಎಸ್ ಭದೌರಿಯಾ ಮಂಗಳವಾರ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


