ದೇಶ

ವಿಜಯದಶಮಿ: ರಾವಣ ದಹನ ಮಾಡಿದ ಪ್ರಧಾನಿ ಮೋದಿ!

ರಾಷ್ಟ್ರ ರಾಜಧಾನಿ ದೆಹಲಿಯ ದ್ವಾರಕಾ ಸೆಕ್ಟರ್ 10 ರಲ್ಲಿ ನಡೆದ ದಸರಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡು, ರಾವಣನನ್ನು ದಹಿಸಿದರು.

ವಿಜಯದಶಮಿ: ರಾವಣ ದಹನ ಮಾಡಿದ ಪ್ರಧಾನಿ ಮೋದಿ!
ಪ್ರಧಾನಿ ನರೇಂದ್ರಮೋದಿ
Published On :

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ದ್ವಾರಕಾ ಸೆಕ್ಟರ್ 10 ರಲ್ಲಿ ನಡೆದ ದಸರಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡು, ರಾವಣನನ್ನು ದಹಿಸಿದರು. 

ದೆಹಲಿ ಬಿಜೆಪಿ ರಾಜ್ಯಾಧ್ಯಕ್ಷ ಮನೋಜ್ ತಿವಾರಿ ಹಾಗೂ ಪಶ್ಚಿಮ ದೆಹಲಿ ಸಂಸದ ಪರ್ವೇಶ್ ಸಾಹಿಬ್ ಸಿಂಗ್  ಪ್ರಧಾನಿ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಬಿಲ್ಲು ಬಾಣಗಳು ಹಾಗೂ ಧಾರ್ಮಿಕ ಗ್ರಂಥ ರಾಮಚರಿತಮಾನಸವನ್ನು ಮೋದಿಗೆ ಕೊಡುಗೆಯಾಗಿ ನೀಡಲಾಯಿತು.ನಂತರ ಬಿಲ್ಲು ಬಾಣಗಳನ್ನು ಬಿಟ್ಟು ರಾವಣ ಪ್ರತಿಕೃತಿಯನ್ನು ದಹಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ನರೇಂದ್ರ ಮೋದಿ, ನಮ್ಮ ನೆಲದಲ್ಲಿ ತಾಯಿಯನ್ನು ಪೂಜೆಸಲಾಗುತ್ತದೆ. ದೇಶದ ಪ್ರತಿಯೊಬ್ಬ ಮಗಳನ್ನು ಗೌರವಿಸುವುದು ನಮ್ಮ ಜವಾಬ್ದಾರಿಯಾಗಿದೆ. ಈ ನೆಲದ ಹೆಣ್ಣು ಮಕ್ಕಳು ಲಕ್ಷ್ಮಿ ಎಂದು ಮನ್ ಕೀ ಬಾತ್ ನಲ್ಲಿ ಹೇಳಿದ್ದೇನೆ. ಅವರೊಟ್ಟಿಗೆ ಮುಂಬರುವ ದೀಪಾವಳಿಯನ್ನು ನಾವೆಲ್ಲರೂ ಆಚರಿಸೋಣ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.