'ಮನ್ ಕಿ ಬಾತ್', 'ಮೌನ್ ಕಿ ಬಾತ್' ಆಗಬಾರದು: ಪ್ರಧಾನಿ ಮೋದಿಗೆ ಶಶಿತರೂರ್
ದೇಶದಲ್ಲಿ ನಡೆಯುತ್ತಿರುವ ಗುಂಪು ಹಲ್ಲೆ ಹಿಂಸಾಚಾರಗಳ ಬಗ್ಗೆ ಬಹಿರಂಗಪತ್ರ ಬರೆದ 49 ಮಂದಿ ಸೆಲೆಬ್ರೆಟಿಗಳ ವಿರುದ್ದ ಪ್ರಕರಣ ದಾಖಲಿಸಿರುವ ಕ್ರಮವನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ವಿರೋಧಿಸಿದ್ದಾರೆ.

ನವದೆಹಲಿ: ದೇಶದಲ್ಲಿ ನಡೆಯುತ್ತಿರುವ ಗುಂಪು ಹಲ್ಲೆ ಹಿಂಸಾಚಾರಗಳ ಬಗ್ಗೆ ಬಹಿರಂಗಪತ್ರ ಬರೆದ 49 ಮಂದಿ ಸೆಲೆಬ್ರೆಟಿಗಳ ವಿರುದ್ದ ಪ್ರಕರಣ ದಾಖಲಿಸಿರುವ ಕ್ರಮವನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ವಿರೋಧಿಸಿದ್ದಾರೆ.
ಈ ಸಂಬಂಧ ತಮ್ಮ ಅಸಮಾಧಾನ ವ್ಯಕ್ತಪಡಿಸಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎರಡು ಪುಟಗಳ ಬಹಿರಂಗಪತ್ರ ಪತ್ರ ಬರೆದಿದ್ದಾರೆ. ಭಿನ್ನಮತವನ್ನು ಗೌರವಿಸುವ ಕುರಿತು ಪ್ರಧಾನಿ ತಮ್ಮ ಸ್ಪಷ್ಟ ನಿಲುವುವನ್ನು ದೇಶದ ಮುಂದೆ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಭಿನ್ನಾಭಿಪ್ರಾಯಗಳ ವಿಷಯದಲ್ಲಿ ಪ್ರಧಾನಿ ಮತ್ತು ಸರ್ಕಾರದ ವಿರುದ್ಧ ಟೀಕೆಗಳು ಎದುರಾದಾಗ ತಾನು ಅಭಿವ್ಯಕ್ತಿ ಸ್ವಾತಂತ್ರ್ಯ ಕಾಪಾಡಲು ಬದ್ಧನಾಗಿರುತ್ತೇನೆ ಎಂದು ದೇಶಕ್ಕೆ ಭರವಸೆ ನೀಡಬೇಕು ಎಂದು ಶಶಿತರೂರ್ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


