ಪಶ್ಚಿಮ ಬಂಗಾಳದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ ಮತ್ತು ಕುಟುಂಬ ಸದಸ್ಯರ ಹತ್ಯೆ: ಬಿಜೆಪಿ ಖಂಡನೆ
ಮುರ್ಷಿದಾಬಾದ್ ನ ಜಿಯಾಗಂಜ್ ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಪ್ರಕಾಶ್ ಪಾಲ್, ಅವರ ಗರ್ಭಿಣಿ ಪತ್ನಿ ಹಾಗೂ ೮ ವರ್ಷದ ಪುತ್ರನನ್ನು ಹತ್ಯೆ ಮಾಡಲಾಗಿದೆ.

ನವದೆಹಲಿ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಬಿಜೆಪಿ ಗುರುವಾರ ವಾಗ್ದಾಳಿ ನಡೆಸಿದೆ. ದೀದಿ ನಿಮ್ಮ ರಾಜ್ಯದಲ್ಲಿ ಏನಾಗುತ್ತಿದೆ ಎಂದು ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗೀಯ ಟ್ವಿಟರ್ ನಲ್ಲಿ ಪ್ರಶ್ನಿಸಿದ್ದಾರೆ.
ಮುರ್ಷಿದಾಬಾದ್ ನ ಜಿಯಾಗಂಜ್ ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಪ್ರಕಾಶ್ ಪಾಲ್, ಅವರ ಗರ್ಭಿಣಿ ಪತ್ನಿ ಹಾಗೂ ೮ ವರ್ಷದ ಪುತ್ರನನ್ನು ಹತ್ಯೆ ಮಾಡಲಾಗಿದೆ. ಇದಕ್ಕಿಂತ ಹೀನಾಯ ಕೃತ್ಯ ನಡೆಯಬೇಕೆ? ಎಂದು ವಿಜಯ ವರ್ಗೀಯ ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟರಮಟ್ಟಿಗೆ ಹದಗೆಟ್ಟಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ ಎಂದಿದ್ದಾರೆ. ಅಪರಿಚಿತ ದುಷ್ಕರ್ಮಿಗಳು ಪ್ರಕಾಶ್ ಪಾಲ್ ಮತ್ತು ಅವರ ಪತ್ನಿ, ಪುತ್ರನನ್ನು ಹರಿತವಾದ ಆಯುಧದಿಂದ ಇರಿದು ಕೊಂದಿದ್ದಾರೆ. ಈ ಘಟನೆಯ ವಿರುದ್ಧ ಬಿಜೆಪಿ ಇಂದು ಪ್ರತಿಭಟನೆ ಹಮ್ಮಿಕೊಂಡಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


