ಮಲಗಿದ್ದ ಭಕ್ತಾದಿಗಳ ಮೇಲೆ ಹರಿದ ಬಸ್: ಮೂರು ಮಕ್ಕಳು ಸೇರಿದಂತೆ 7ಮಂದಿ ದುರ್ಮರಣ
ಮಲಗಿದ್ದ ಭಕ್ತಾದಿಗಳ ಮೇಲೆ ಬಸ್ ಹರಿದ ಪರಿಣಾಮ ನಾಲ್ವರು ಮಹಿಳೆಯರು, ಮೂರು ಮಕ್ಕಳು ಸೇರಿದಂತೆ ಏಳು ಜನರು ಮೃತಪಟ್ಟಿರುವ ದಾರುಣ ಘಟನೆ ಉತ್ತರಪ್ರದೇಶದ ಬುಲಂದ್ ಶಹರ್ ನಲ್ಲಿ ನಡೆದಿದೆ.

ಬುಲಂದ್ ಶಹರ್: ಮಲಗಿದ್ದ ಭಕ್ತಾದಿಗಳ ಮೇಲೆ ಬಸ್ ಹರಿದ ಪರಿಣಾಮ ನಾಲ್ವರು ಮಹಿಳೆಯರು, ಮೂರು ಮಕ್ಕಳು ಸೇರಿದಂತೆ ಏಳು ಜನರು ಮೃತಪಟ್ಟಿರುವ ದಾರುಣ ಘಟನೆ ಉತ್ತರಪ್ರದೇಶದ ಬುಲಂದ್ ಶಹರ್ ನಲ್ಲಿ ನಡೆದಿದೆ.
ತೀರ್ಥಯಾತ್ರೆಗೆಂದು ಗಂಗಾಘಾಟ್ ಗೆ ಬಂದಿದ್ದ ಜನರು ಪಾದಚಾರಿ ಮಾರ್ಗದಲ್ಲಿ ಮಲಗಿದ್ದರು. ಈ ವೇಳೆ ಖಾಸಗಿ ಬಸ್ಸೊಂದು ಅವರ ಮೇಲೆ ಹರಿದು ಏಳು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರೆಲ್ಲರೂ ಉತ್ತರಪ್ರದೇಶದ ಹತ್ರಾಸ್ ಮೂಲದವರು ಎಂದು ತಿಳಿದುಬಂದಿದೆ. ವೈಷ್ಣೋದೇವಿ ದರ್ಶನ ಪಡೆದು ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ, ಅಪಘಾತದ ನಂತರ ಬಸ್ ಚಾಲಕ ಪರಾರಿಯಾಗಿದ್ದು ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


