ಪರಿಸರವಾದಿ ಚಾಂದಿ ಪ್ರಸಾದ್ ಭಟ್ ಗೆ 'ಇಂದಿರಾ ಗಾಂಧಿ ರಾಷ್ಟ್ರೀಯ ಸಮಗ್ರತೆ ಪ್ರಶಸ್ತಿ'
ಪರಿಸರವಾದಿ ಮತ್ತು ಗಾಂಧಿವಾದಿ ಚಾಂದಿ ಪ್ರಸಾದ್ ಭಟ್ ಅವರನ್ನು 'ಇಂದಿರಾ ಗಾಂಧಿ ರಾಷ್ಟ್ರೀಯ ಸಮಗ್ರತೆ ಪ್ರಶಸ್ತಿ' ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ನವದೆಹಲಿ: ಪರಿಸರವಾದಿ ಮತ್ತು ಗಾಂಧಿವಾದಿ ಚಾಂದಿ ಪ್ರಸಾದ್ ಭಟ್ ಅವರನ್ನು 'ಇಂದಿರಾ ಗಾಂಧಿ ರಾಷ್ಟ್ರೀಯ ಸಮಗ್ರತೆ ಪ್ರಶಸ್ತಿ' ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಅತ್ಯಂತ ಪ್ರಿಯವಾಗಿದ್ದ ರಾಷ್ಟ್ರೀಯ ಸಮಗ್ರತೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಅವರ ಜನಮ್ ಶತಮಾನೋತ್ಸವದ ಸ್ಮರಣಾರ್ಥ ದೇಶದ ಅಭಿವೃಧ್ಧಿಗೆ ಉತ್ತಮ ಸೇವೆ ಸಲ್ಲಿಸುವ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ನೀಡಲಾಗುತ್ತಿದೆ.
ಈ ಪ್ರಶಸ್ತಿ 10 ಲಕ್ಷ ನಗದನ್ನು ಒಳಗೊಂಡಿದೆ. ಅ.31ರಂದು ದೆಹಲಿಯ ಜವಹರ್ ಭವನದಲ್ಲಿ ಪ್ರಶಸ್ತಿ ವಿತರಿಸಲಾಗುವುದು.
ಈ ಹಿಂದೆ ಸ್ವಾಮಿ ರಂಗನಾಥಾನಂದ, ಅರುಣಾ ಅಸಫ್ ಅಲಿ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ , ಪಿ.ಎನ್. ಹಕ್ಸರ್, ಎಂ.ಎಸ್. ಸುಬ್ಬಲಕ್ಷ್ಮೀ,ಮತ್ತು ರಾಜೀವ್ ಗಾಂಧಿ (ಮರಣೋತ್ತರ) ಪ್ರಶಸ್ತಿ ಗೆ ಭಾಜನರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


