ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಚಿದಂಬರಂ ವಿರುದ್ಧ ಪ್ರೊಡಕ್ಷನ್ ವಾರಂಟ್ ಜಾರಿ
ಐಎನ್‌ಎಕ್ಸ್ ಮೀಡಿಯಾ ಮನಿ ಲ್ಯಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿದ ಅರ್ಜಿಯನ್ನು ಕೇಳಿದ ದೆಹಲಿ ಕೋರ್ಟ್ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ವಿರುದ್ಧ ಅಕ್ಟೋಬರ್ 14ಕ್ಕೆ ಹಾಜರುಪಡಿಸಿ ಎಂದು ಪ್ರೊಡಕ್ಷನ್ ವಾರಂಟ್ ಹೊರಡಿಸಿದೆ.

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಮನಿ ಲ್ಯಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿದ ಅರ್ಜಿಯನ್ನು ಕೇಳಿದ ದೆಹಲಿ ಕೋರ್ಟ್ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ವಿರುದ್ಧ ಅಕ್ಟೋಬರ್ 14ಕ್ಕೆ ಹಾಜರುಪಡಿಸಿ ಎಂದು ಪ್ರೊಡಕ್ಷನ್ ವಾರಂಟ್ ಹೊರಡಿಸಿದೆ.
ಈ ಪ್ರಕರಣದಲ್ಲಿ ಇಡಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದು ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ವಾರಂಟ್ ಜಾರಿ ಮಾಡಿದ್ದಾರೆ. ಚಿದಂಬರಂ ಅವರನ್ನು ಅಕ್ಟೋಬರ್ 14 ರಂದು ಮಧ್ಯಾಹ್ನ 3 ಗಂಟೆಗೆ ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ.
ಚಿದಂಬರಂ ಅವರನ್ನು ಕಸ್ಟಡಿಯಲ್ಲಿ ವಿಚಾರಣೆ ನಡೆಸುವ ಅಗತ್ಯವಿದೆ ದೆ ಎಂದು ಇಡಿ ತನ್ನ ಮನವಿಯಲ್ಲಿ ತಿಳಿಸಿದೆ.ಸಿಬಿಐ ದಾಖಲಿಸಿರುವ ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾರೆ.ಇದೇ ವೇಳೆ ಶರಣಾಗತಿ ಕೋರಿ ಇಡಿ ಸಲ್ಲಿಸಿದ್ದ ಮನವಿಯನ್ನು ಹಿಂದೆ ನ್ಯಾಯಾಲಯ ತಿರಸ್ಕರಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


