ಜ್ಯೋತಿರಾದಿತ್ಯ ಸಿಂಧಿಯಾ ಸ್ವಾಗತ ಕೋರಿ ಬಿಜೆಪಿ ಫ್ಲೆಕ್ಸ್, ಮಧ್ಯಪ್ರದೇಶದಲ್ಲಿ ರಾಜಕೀಯ ಬಿರುಗಾಳಿ!
ಎಐಸಿಸಿ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಸ್ವಾಗತ ಕೋರಿ ಬಿಜೆಪಿ ಅಳವಡಿಸಿರುವ ಒಂದು ಫ್ಲೆಕ್ಸ್ ಮಧ್ಯಪ್ರದೇಶ ರಾಜ್ಯ ರಾಜಕೀಯದಲ್ಲಿ ವದಂತಿಗಳ ಬಿರುಗಾಳಿಯನ್ನೇ ಸೃಷ್ಟಿಸಿದೆ.

ಭೋಪಾಲ್: ಎಐಸಿಸಿ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಸ್ವಾಗತ ಕೋರಿ ಬಿಜೆಪಿ ಅಳವಡಿಸಿರುವ ಒಂದು ಫ್ಲೆಕ್ಸ್ ಮಧ್ಯಪ್ರದೇಶ ರಾಜ್ಯ ರಾಜಕೀಯದಲ್ಲಿ ವದಂತಿಗಳ ಬಿರುಗಾಳಿಯನ್ನೇ ಸೃಷ್ಟಿಸಿದೆ.
ಸಿಂಧಿಯಾ ಅವರು ಬಿಂಡ್ ಜಿಲ್ಲೆಯ ಭೇಟಿಯ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ಮುಖಂಡರೊಬ್ಬರು ಈ ಪ್ಲೆಕ್ಸ್ ಹಾಕಿಸಿದ್ದರು. ಸಿಂಧಿಯಾ ಅವರ ಜೊತೆಗೆ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿತ್ರಗಳು ಅದರಲ್ಲಿ ರಾರಾಜಿಸಿದ್ದವು.
ಸಂವಿಧಾನದ 370 ನೇ ವಿಧಿ ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಬೆಂಬಲಿಸಿ ಸ್ಥಳೀಯ ಬಿಜೆಪಿ ಮುಖಂಡ ಹೃದ್ಯೇಶ್ ಶರ್ಮಾ ಈ ಪ್ಲೆಕ್ಸ್ ಅಳವಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


