'ಜಗನ್ ರೆಡ್ಡಿ' ಸೈಕೋ ರೀತಿಯಲ್ಲಿ ವರ್ತಿಸುತ್ತಿದ್ದಾರೆ: ಚಂದ್ರಬಾಬು ನಾಯ್ಡು
ಮುಖ್ಯಮಂತ್ರಿ ಜಗನ್ ಮೋಹನ್ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದಾರೆ ಎಂದು ಪರಮ ವೈರಿ ಮಾಜಿ ಸಿಎಂ ಎನ್ ಚಂದ್ರಬಾಬು ನಾಯ್ಡು ಕಿಡಿಕಾರಿದ್ದಾರೆ.

ವಿಶಾಖಪಟ್ಟಣಂ: ಮುಖ್ಯಮಂತ್ರಿ ಜಗನ್ ಮೋಹನ್ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದಾರೆ ಎಂದು ಪರಮ ವೈರಿ ಮಾಜಿ ಸಿಎಂ ಎನ್ ಚಂದ್ರಬಾಬು ನಾಯ್ಡು ಕಿಡಿಕಾರಿದ್ದಾರೆ.
ಜನವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದ್ದಾರೆ,ಬೇರೆ ಪಕ್ಷಗಳ ಕಾರ್ಯಕರ್ತರ ವಿರುದ್ದ ಸುಖಾಸುಮ್ಮನೆ ಕೇಸು ದಾಖಲಿಸಲಾಗುತ್ತಿದೆ,. ಪೊಲೀಸರು ಸುಮ್ಮನೆ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ, ಸಿಎಂ ಜಗನ್ ಸೈಕೋ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ವೈಎಸ್ ಆರ್ ಪಿಸಿ ಆಡಳಿತ ಅತಿ ಕೆಟ್ಟದ್ದಾಗಿದೆ, ಪಕ್ಷದ ಮುಖಂಡರು ಜಗನ್ ಟ್ಯಾಕ್ಸ್ ವಸೂಲಿ ಮಾಡುತ್ತಿದ್ದಾರೆ, ನಾನು ಹಲವು ಸಿಎಂ ಗಳನ್ನು ನೋಡಿದ್ದೇನೆ, ಆದರೆ ಇಂಥ ಸಿಎಂಗಳನ್ನು ನಾನು ಎಂದಿಗೂ ನೋಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ನಾನು ಎಲ್ಲರಿಗೂ ಒಂದೇ,ಸರ್ಕಾರ ತನ್ನ ವರ್ತನೆ ಬದಲಿಸಿಕೊಳ್ಳುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


