'ಒಂದೇ ದಿನ ಮೂರು ಸಿನಿಮಾಗಳ ಕಲೆಕ್ಷನ್ 120 ಕೋಟಿ: ದೇಶದ ಆರ್ಥಿಕತೆ ಸುಭದ್ರ-ರವಿಶಂಕರ್ ಪ್ರಸಾದ್
ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಮೂರು ಸಿನಿಮಾಗಳ 120 ಕೋಟಿ ಬಾಕ್ಸ್ ಆಫೀಸ್ ಕಲೆಕ್ಷನ್ ಉದಾಹರಣೆಯಾಗಿ ನೀಡುವ ಮೂಲಕ ದೇಶದ ಆರ್ಥಿಕತೆ ಉತ್ತಮವಾಗಿದೆ. ಆರ್ಥಿಕ ಹಿಂಜರಿತ ಇಲ್ಲ ಎಂದಿದ್ದಾರೆ.

ಮುಂಬೈ: ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಮೂರು ಸಿನಿಮಾಗಳ 120 ಕೋಟಿ ಬಾಕ್ಸ್ ಆಫೀಸ್ ಕಲೆಕ್ಷನ್ ಉದಾಹರಣೆಯಾಗಿ ನೀಡುವ ಮೂಲಕ ದೇಶದ ಆರ್ಥಿಕತೆ ಉತ್ತಮವಾಗಿದೆ. ಆರ್ಥಿಕ ಹಿಂಜರಿತ ಇಲ್ಲ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ದೇಶದ ಆರ್ಥಿಕತೆ ಬಗ್ಗೆ ಭಯಪಡಬೇಕಾದ ಅಗತ್ಯವಿಲ್ಲ. ದೇಶದ ಆರ್ಥಿಕತೆ ಸದೃಢವಾಗಿದೆ. ವಿದೇಶಿ ನೇರ ಹೂಡಿಕೆ ಶೇ.20 ರಷ್ಟು ಹೆಚ್ಚಾಗಿದೆ. ಕಳೆದ ಒಂದು ವರ್ಷದಲ್ಲಿ ಭಾರತದಲ್ಲಿ 16. 3 ಬಿಲಿಯನ್ ಅಮೆರಿಕನ್ ಡಾಲರ್ ನಷ್ಟು ಹೂಡಿಕೆಯಾಗಿದೆ ಎಂದರು.
ತಮ್ಮ ಹೇಳಿಕೆಗೆ ಬಾಕ್ಸ್ ಆಫೀಸ್ ಕಲೆಕ್ಷನ್ ಉದಾಹರಣೆಯನ್ನಾಗಿ ನೀಡಿದ ರವಿಶಂಕರ್ ಪ್ರಸಾದ್, ಅಕ್ಟೋಬರ್ 2 ರಂದು ಬಿಡುಗಡೆಯಾದ ಮೂರು ಚಿತ್ರಗಳು ಒಂದೇ ದಿನ 120 ಕೋಟಿ ಕಲೆಕ್ಷನ್ ಮಾಡಿವೆ ಎಂದ ಮೇಲೆ ದೇಶದಲ್ಲಿ ಆರ್ಥಿಕ ಹಿಂಜರಿತ ಇಲ್ಲ ಎಂದರು. ಅಲ್ಲದೇ, ದೇಶದಲ್ಲಿ 120 ಕೋಟಿ ಆದಾಯ ಬರುತ್ತದೆ ಅಂದಮೇಲೆ ದೇಶದ ಪ್ರಗತಿ ಉತ್ತಮವಾಗಿದೆ ಎಂದರ್ಥ ಎಂದು ಸಮರ್ಥಿಸಿಕೊಂಡರು.
ಹಣದುಬ್ಬರ ಪ್ರಮಾಣ ಕಡಿಮೆಯಾಗಿದೆ. ತೆರಿಗೆದಾರರ ಸಂಖ್ಯೆಯ ದ್ವಿಗುಣವಾಗಿದೆ. ಒಟ್ಟಾರೆ ಆದಾಯ ತೆರಿಗೆ ಸಂಗ್ರಹದಲ್ಲಿ ಎರಡು ಪಟ್ಟು ಹೆಚ್ಚಾಗಿದೆ. ಜಾಗತಿಕವಾಗಿ ಆರ್ಥಿಕ ಹಿಂಜರಿತವಿದ್ದರೂ ಭಾರತದ ಆರ್ಥಿಕತೆ ಬೆಳವಣಿಗೆ ದರ ಶೇ. 6 ಕ್ಕಿಂತಲೂ ಹೆಚ್ಚಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


