ಮಹಾ ಚುನಾವಣೆ: ಶಿವಸೇನೆಯ ಈ ಅಭ್ಯರ್ಥಿ ಒಂದೊಂದು ಏರಿಯಾದಲ್ಲಿ ಒಂದೊಂದು ಹೆಸರಿನಿಂದ ಪ್ರಚಾರ!
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಕಣ ರಂಗೇರಿದ್ದು, ಅಭ್ಯರ್ಥಿಗಳು ಪ್ರಚಾರದಲ್ಲಿ ತೊಡಗಿದ್ದಾರೆ. ಈ ನಡುವೆ ಶಿವಸೇನೆಯ ಮುಂಬ್ರಾ-ಕಲ್ವಾ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎರಡು ಪ್ರತ್ಯೇಕ ಏರಿಯಾಗಳಲ್ಲಿ ಬೇರೆ ಬೇರೆ ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ.

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಕಣ ರಂಗೇರಿದ್ದು, ಅಭ್ಯರ್ಥಿಗಳು ಪ್ರಚಾರದಲ್ಲಿ ತೊಡಗಿದ್ದಾರೆ. ಈ ನಡುವೆ ಶಿವಸೇನೆಯ ಮುಂಬ್ರಾ-ಕಲ್ವಾ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎರಡು ಪ್ರತ್ಯೇಕ ಏರಿಯಾಗಳಲ್ಲಿ ಬೇರೆ ಬೇರೆ ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ.
ಈ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ದೀಪಾಲಿ ಭೋಸ್ಲೆ ಸೋಫಿಯಾ ಸಯೀದ್ ಎಂಬ ಹೆಸರಿನಿಂದಲೂ ಹೆಚ್ಚು ಪರಿಚಿತರು. ದೀಪಾಲಿ ಮರಾಠಿ ನಟಿಯಾಗಿದ್ದು, ವಿವಾಹದ ನಂತರ ಆಕೆಯ ಹೆಸರನ್ನು ಸೋಫಿಯಾ ಸಯೀದ್ ಎಂದು ಬದಲಾವಣೆ ಮಾಡಿಕೊಂಡಿದ್ದಾರೆ.
ಹಿಂದೂಗಳ ಜನಸಂಖ್ಯೆ ಇರುವ ಪ್ರದೇಶದಲ್ಲಿ ಶಿವಸೇನೆಯ ಅಭ್ಯರ್ಥಿ ದೀಪಾಲಿ ಎಂಬ ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಮುಸ್ಲಿಮರು ಹೆಚ್ಚಿರುವ ಪ್ರದೇಶದಲ್ಲಿ ಸೋಫಿಯಾ ಎಂಬ ಹೆಸರಿನಲ್ಲಿ ಪ್ರಚಾರದಲ್ಲಿ ಭಾಗಿಯಾಗುತ್ತಿದ್ದಾರೆ.
ನಾಮಪತ್ರದಲ್ಲಿ ದಾಖಲಾಗಿರುವ ಅಧಿಕೃತ ಹೆಸರು ದೀಪಾಲಿ ಸಯೀದ್, ಪ್ರಚಾರ ಪೋಸ್ಟರ್ ಗಳಲ್ಲಿ ದೀಪಾಲಿ ಭೋಸ್ಲೆ ಸಯೀದ್ ಎಂಬ ಹೆಸರು ಕಾಣಸಿಗುತ್ತವೆ. ಅ.21 ರಂದು ವಿಧಾನಸಭೆಗೆ ಮತದಾನ ನಡೆಯಲಿದ್ದು ಅ.24 ರಂದು ಮತ ಎಣಿಕೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


