ದೆಹಲಿಯಲ್ಲಿ ಮತ್ತೆ ಸಮ-ಬೆಸ ಸಂಚಾರ: ಮಹಿಳೆಯರಿಗೆ ವಿನಾಯ್ತಿ ಘೋಷಿಸಿದ ಕೇಜ್ರಿವಾಲ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಸಮ-ಬೆಸ ಸಂಚಾರ ನಿಯಮ ಜಾರಿಗೆ ತರಲಾಗುತ್ತಿದ್ದು, ಮಹಿಳೆಯರಿಗೆ ಈ ನಿಯಮದಿಂದ ವಿನಾಯ್ತಿ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಘೋಷಿಸಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಸಮ-ಬೆಸ ಸಂಚಾರ ನಿಯಮ ಜಾರಿಗೆ ತರಲಾಗುತ್ತಿದ್ದು, ಮಹಿಳೆಯರಿಗೆ ಈ ನಿಯಮದಿಂದ ವಿನಾಯ್ತಿ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಘೋಷಿಸಿದ್ದಾರೆ.
ವಾಯುಮಾಲಿನ್ಯ ನಿಯಂತ್ರಣಕ್ಕಾಗಿ ದೆಹಲಿಯಲ್ಲಿ ಮೂರನೇ ಬಾರಿ, ನವೆಂಬರ್ 4 ರಿಂದ 15ರ ವರೆಗೆ ಸಮ - ಬೆಸ ಸಂಖ್ಯೆಯ ವಾಹನ ಸಂಚಾರ ನಿಯಮ ಜಾರಿಗೆ ತರಲಾಗುವುದು. ಈ ಬಾರಿ ಖಾಸಗಿ ಸಿಎನ್ ಜಿ ವಾಹನಗಳಿಗೆ ವಿನಾಯ್ತಿ ನೀಡುವುದಿಲ್ಲ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.
ಮಹಿಳಾ ಚಾಲಕರು ಇರುವ ಹಾಗೂ ವಾಹನದಲ್ಲಿ ಎಲ್ಲಾ ಮಹಿಳೆಯರು ಮತ್ತು 12 ವರ್ಷದೊಳಗಿನ ಮಕ್ಕಳು ಇರುವ ವಾಹನಕ್ಕೆ ವಿನಾಯ್ತಿ ನೀಡಲಾಗಿದೆ ಎಂದು ದೆಹಲಿ ಸಿಎಂ ತಿಳಿಸಿದ್ದಾರೆ.
ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಇನ್ನು ದ್ವಿಚಕ್ರ ವಾಹನಗಳಿಗೆ ಸಮ-ಬೆಸ ಸಂಚಾರ ನಿಯಮದಿಂದ ವಿನಾಯ್ತಿ ನೀಡಬೇಕೆ ಅಥವಾ ಬೇಡವೇ ಎಂಬ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ತಜ್ಞರೊಂದಿಗೆ ಚರ್ಚಿಸಿ ಈ ಕುರಿತು ನಿರ್ಧಾರ ಪ್ರಕಟಿಸುವುದಾಗಿ ಸಿಎಂ ತಿಳಿಸಿದ್ದಾರೆ.
ಚಳಿಗಾಲದಲ್ಲಿ ವಾಯು ಮಾಲಿನ್ಯ ಪ್ರಮಾಣ ಏರಿಕೆಯಾಗುವ ಹಿನ್ನಲೆಯಲ್ಲಿ ನವೆಂಬರ್ 4ರಿಂದ 15ರವರೆಗೆ ಅಂದರೆ ಒಟ್ಟು 12 ದಿನಗಳ ಕಾಲ ಸಮ-ಬೆಸ ಸಂಚಾರ ವ್ಯವಸ್ಥೆ ಮಾಡಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಇದರ ಪ್ರಕಾರ ನವೆಂಬರ್ 4, 6, 8, 10, 12, 14ರಂದು ಸಮ ಸಂಖ್ಯೆ ನೋಂದಣಿಯ ವಾಹನಗಳು ರಸ್ತೆಗಿಳಿಯಬಹುದು. ಪರ್ಯಾಯ ದಿನಗಳಲ್ಲಿ ಬೆಸ ಸಂಖ್ಯೆ ನೋಂದಣಿ ಹೊಂದಿದ ವಾಹನಗಳಿಗೆ ರಸ್ತೆಗಿಳಿಯಲು ಅವಕಾಶವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


