ನಿಮ್ಮ ಕೈಯಲ್ಲಿ ಆಗದಿದ್ದರೆ ಹೇಳಿ, ಉಗ್ರತ್ವವನ್ನು ನಾವು ಮಟ್ಟ ಹಾಕುತ್ತೇವೆ: ಪಾಕ್ಗೆ ರಾಜನಾಥ್ ಎಚ್ಚರಿಕೆ
ಭಯೋತ್ಪಾದನೆಯನ್ನು ನಿಗ್ರಹಿಸಲು ನಿಮ್ಮಿಂದ ಸಾಧ್ಯವಾಗದೆ ಇದ್ದರೆ ಹೇಳಿ ನಾವು ಮಟ್ಟ ಹಾಕುತ್ತೇವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡದ್ದಾರೆ.

ಚಂಡೀಗಢ: ಭಯೋತ್ಪಾದನೆಯನ್ನು ನಿಗ್ರಹಿಸಲು ನಿಮ್ಮಿಂದ ಸಾಧ್ಯವಾಗದೆ ಇದ್ದರೆ ಹೇಳಿ ನಾವು ಮಟ್ಟ ಹಾಕುತ್ತೇವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡದ್ದಾರೆ.
ಹರಿಯಾಣದಲ್ಲಿ ಸೋನಿಪತ್ ನಗರದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ರಾಜನಾಥ್ ಸಿಂಗ್ ಅವರು ಜಗತ್ತಿನ ಮುಂದೆ ಭಯೋತ್ಪಾದನೆಯನ್ನು ನಿಗ್ರಹಿಸುವ ಆಶ್ವಾಸನೆಗಳನ್ನು ಮಾತ್ರ ಕೊಡುತ್ತಿದ್ದೀರಾ. ನಿಮ್ಮ ಕೈಯಲ್ಲಿ ಆಗದಿದ್ದರೆ ಹೇಳಿಬಿಡಿ ನಾವು ಉಗ್ರತ್ವವನ್ನು ಮಟ್ಟ ಹಾಕುತ್ತೇವೆ ಎಂದರು.
ಭಾರತದ ವಿಚಾರದಲ್ಲಿ ಪಾಕಿಸ್ತಾನವು ತನ್ನ ಆಲೋಚನೆಗಳನ್ನು ಬದಲಾಯಿಸಿಕೊಳ್ಳಬೇಕು. ಇಲ್ಲದಿದ್ದರೆ ಈ ಹಿಂದೆ ಎರಡು ಭಾಗವಾಗಿ ವಿಂಗಡಿಸಿದ್ದ ಪಾಕಿಸ್ತಾನವನ್ನು ಈಗ ಹಲವು ಭಾಗಗಳನ್ನಾಗಿ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


