ಭಾರತದ ಆರ್ಥಿಕ ಬೆಳವಣಿಗೆ ಶೇ 6ಕ್ಕೆ ಕುಸಿಯಲಿದೆ: ವಿಶ್ವಬ್ಯಾಂಕ್
ಭಾರತದ ಆರ್ಥಿಕ ಬೆಳವಣಿಗೆ ಪ್ರಮಾಣ ಶೇ 6ಕ್ಕೆ ಕುಸಿಯಲಿದೆ ಎಂದು ವಿಶ್ವಬ್ಯಾಂಕ್ ಅಂದಾಜಿಸಿದೆ.

ವಾಷಿಂಗ್ಟನ್: ಭಾರತದ ಆರ್ಥಿಕ ಬೆಳವಣಿಗೆ ಪ್ರಮಾಣ ಶೇ 6ಕ್ಕೆ ಕುಸಿಯಲಿದೆ ಎಂದು ವಿಶ್ವಬ್ಯಾಂಕ್ ಅಂದಾಜಿಸಿದೆ.
ದಕ್ಷಿಣ ಏಷ್ಯಾ ರಾಷ್ಟ್ರಗಳ ಆರ್ಥಿಕತೆಯನ್ನು ಕೇಂದ್ರೀಕರಿಸಿ ವಿಶ್ವಬ್ಯಾಂಕ್ ದ್ವೈವಾರ್ಷಿಕ ವರದಿ ಸಿದ್ಧಪಡಿಸಲಾಗುತ್ತಿದ್ದು, 2018–19ನೇ ವಿತ್ತೀಯ ವರ್ಷದಲ್ಲಿ ದೇಶದ ಆರ್ಥಿಕ ವೃದ್ಧಿ ದರವು ಶೇ 6.9ರಷ್ಟು ದಾಖಲಾಗಿದೆ ಎನ್ನಲಾಗಿದೆ.
ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಜತೆಗಿನ ಸಭೆಯ ಹಿನ್ನೆಲೆಯಲ್ಲಿ ವಿಶ್ವಬ್ಯಾಂಕ್ ಈ ವರದಿ ಬಿಡುಗಡೆ ಮಾಡಿದೆ. 2017-18ನೇ ವತ್ತೀಯ ವರ್ಷದಲ್ಲಿ ಶೇ 7.2ರಷ್ಟಿದ್ದ ಆರ್ಥಿಕ ವೃದ್ಧಿ ದರವು 2018–19ರಲ್ಲಿ ಶೇ 6.8 ದಾಖಲಾಗಿದೆ. ಉತ್ಪಾದನೆ ಮತ್ತು ನಿರ್ಮಾಣ ಚಟುವಟಿಕೆಗಳು ಚೇತರಿಸಿಕೊಂಡಿರುವುದರಿಂದ ಕೈಗಾರಿಕಾ ಉತ್ಪಾದನೆ ವೃದ್ಧಿ ದರ ಶೇ 6.9ಕ್ಕೆ ಏರಿಕೆ ಕಂಡಿದೆ. ಕೃಷಿ ಮತ್ತು ಸೇವಾ ವಲಯಗಳಲ್ಲಿನ ವೃದ್ಧಿ ದರವು ಕ್ರಮವಾಗಿ ಶೇ 2.9 ಮತ್ತು ಶೇ 7.5ರಷ್ಟು ಎಂದಿದೆ. 2019–20ರ ಮೊದಲ ತ್ರೈಮಾಸಿಕದಲ್ಲಿ ಬೇಡಿಕೆ ಕುಸಿತದಿಂದಾಗಿ ಕೈಗಾರಿಕೆ ಮತ್ತು ಸೇವಾ ವಲಯದ ಪೂರೈಕೆ ವಲಯ ಕುಂಠಿತ ಕಂಡಿರುವುದಾಗಿ ವಿಶ್ವಬ್ಯಾಂಕ್ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಇನ್ನು ಅಮೆರಿಕನ್ ಡಾಲರ್ ಎದುರು ರೂಪಾಯಿ ಮೌಲ್ಯ 2018ರ ಮಾರ್ಚ್‌ನಿಂದ ಅಕ್ಟೋಬರ್ ವರೆಗೂ ಶೇ 12.1ರಷ್ಟು ಕುಸಿದಿತ್ತು. ಆದರೆ ಬಳಿಕ ಅಂದರೆ 2019ರ ಮಾರ್ಚ್ ವರೆಗೂ ಶೇ 7ರಷ್ಟು ಏರಿಕೆ ಕಂಡಿತ್ತು ಎಂದು ವರದಿಯಲ್ಲಿ ತಿಳಿಸಿದೆ.
Related Article
ಉತ್ಪಾದನ ವಲಯದ ಕಳಪೆ ಸಾಧನೆ: ಕೈಗಾರಿಕಾ ಉತ್ಪಾದನೆಯು ಆಗಸ್ಟ್ನಲ್ಲಿ ಶೇ. 1.1ರಷ್ಟು ಕುಸಿತ
ಸತತ 5ನೇ ಬಾರಿ ರೆಪೋ ದರ ಇಳಿಕೆ, ಮತ್ತೆ 25 ಮೂಲಾಂಕ ಕಡಿತ ಮಾಡಿದ ಆರ್ ಬಿಐ
ಆರ್ ಬಿಐನಿಂದ 26 ಬ್ಯಾಂಕಿಂಗೇತರ ಹಣಕಾಸು ಸಂಸ್ಥೆಗಳ ನೋಂದಣಿ ರದ್ದು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


