ದೇಶ

ಉತ್ತರ ಪ್ರದೇಶ: ತಾಯಿ, ಪತ್ನಿ ಕಿರುಕುಳಕ್ಕೆ ಬೇಸತ್ತು 40 ವರ್ಷದ ವ್ಯಕ್ತಿ ಆತ್ಯಹತ್ಯೆಗೆ ಶರಣು

ಪತ್ನಿ ಹಾಗೂ ತಾಯಿಯ ಕಿರುಕುಳಕ್ಕೆ ಬೇಸತ್ತು 40 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಜನಸಾಥ್ ನಲ್ಲಿ ನಡೆದಿದೆ.

ಉತ್ತರ ಪ್ರದೇಶ: ತಾಯಿ, ಪತ್ನಿ ಕಿರುಕುಳಕ್ಕೆ ಬೇಸತ್ತು 40 ವರ್ಷದ ವ್ಯಕ್ತಿ ಆತ್ಯಹತ್ಯೆಗೆ ಶರಣು
ಸಾಂದರ್ಭಿಕ ಚಿತ್ರ
Published On :

ಮುಜಾಫರ್ ನಗರ: ಪತ್ನಿ ಹಾಗೂ ತಾಯಿಯ ಕಿರುಕುಳಕ್ಕೆ ಬೇಸತ್ತು 40 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಜನಸಾಥ್ ನಲ್ಲಿ ನಡೆದಿದೆ.

ಅಹ್ರೋಡ ಗ್ರಾಮದ ಗುಜ್ಜರ್ ಸದ್ಭಾವನಾ ಸಮಾಜದ ಜಿಲ್ಲಾ ಕಾರ್ಯದರ್ಶಿಯಾಗಿದ್ದ ಸತೀಶ್ ಭದನ ಅವರು ಪತ್ನಿ ಹಾಗೂ ತಾಯಿಯ ಕಿರುಕುಳ ತಾಳಲಾರದೇ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸತೀಶ್ ಅವರು ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾರೆ ಮತ್ತು ಅದನ್ನು ವಾಟ್ಸ್ ಆಪ್ ನಲ್ಲೂ ಪೋಸ್ಟ್ ಮಾಡಿದ್ದಾರೆ ಎಂದು ಪೊಲೀಸ್ ಠಾಣಾ ಅಧಿಕಾರಿ ಯೋಗೇಶ್ ಶರ್ಮಾ ಅವರು ಹೇಳಿದ್ದಾರೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.