ಅಭಿಜಿತ್ ಬ್ಯಾನರ್ಜಿ ಗೆ ನೊಬೆಲ್ :'ಅಮರ್ಥ್ಯ ಸೇನ್ ಅತೀವ ಸಂತಸ!
ಭಾರತೀಯ ಮೂಲದ ಅಭಿಜಿತ್ ಬ್ಯಾನರ್ಜಿ ಅವರಿಗೆ ನೊಬೆಲ್ ಪ್ರಶಸ್ತಿ ಲಭಿಸಿರುವುದಕ್ಕೆ ಹಿರಿಯ ಅರ್ಥಶಾಸ್ತ್ರಜ್ಞ ಹಾಗೂ ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ಥ್ಯಸೇನ್ ಅತೀವ ಸಂತೋಷ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಭಾರತೀಯ ಮೂಲದ ಅಭಿಜಿತ್ ಬ್ಯಾನರ್ಜಿ ಅವರಿಗೆ ನೊಬೆಲ್ ಪ್ರಶಸ್ತಿ ಲಭಿಸಿರುವುದಕ್ಕೆ ಹಿರಿಯ ಅರ್ಥಶಾಸ್ತ್ರಜ್ಞ ಹಾಗೂ ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ಥ್ಯಸೇನ್ ಅತೀವ ಸಂತೋಷ ವ್ಯಕ್ತಪಡಿಸಿದ್ದಾರೆ.
ಅರ್ಥಶಾಸ್ತ್ರದಲ್ಲಿ ಅಭಿಜಿತ್ ವಿನಾಯಕ್ ಬ್ಯಾನರ್ಜಿ ಅವರಿಗೆ ನೊಬೆಲ್ ಪ್ರಶಸ್ತಿ ಸಿಕ್ಕಿರುವುದಕ್ಕೆ ತುಂಬಾ ತುಂಬಾ ಸಂತೋಷವಾಗುತ್ತಿದೆ ಎಂದು ಅಮರ್ಥ್ಯಸೇನ್ ಪ್ರತಿಕ್ರಿಯಿಸಿದ್ದಾರೆ. 1998ರಲ್ಲಿ ಆರ್ಥಿಕ ಕಲ್ಯಾಣ ಕೊಡುಗೆಗಾಗಿ ಅಮರ್ಥ್ಯ ಸೇನ್ ಕೂಡಾ ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದರು.
ಬೊಸ್ಟಾನ್ ನಿಂದ ಪಿಐಟಿ ಸುದ್ದಿಸಂಸ್ಥೆ ಜೊತೆಗೆ ಮಾತಾಡಿರುವ ಅಮರ್ಥ್ಯ ಸೇನ್, ತುಂಬಾ ಸಮರ್ಥರಾದ ವ್ಯಕ್ತಿಗಳಿಗೆ ನೊಬೆಲ್ ಪ್ರಶಸ್ತಿ ನೀಡಲಾಗಿದೆ ಎಂದು ಭಾವಿಸುವುದಾಗಿ ಅವರು ಹೇಳಿದ್ದಾರೆ.
58 ವರ್ಷದ ಬ್ಯಾನರ್ಜಿ ಅವರ ಪತ್ನಿ, ಎಸ್ತರ್ ಡುಫ್ಲೋ ಮತ್ತು ಮೈಕೆಲ್ ಕ್ರೆಮರ್ ಅವರುಗಳು 2019ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬ್ಯಾನರ್ಜಿ ಪ್ರಸ್ತುತ ಮ್ಯಾಸಚೂಸೆಟ್ ನ ತಂತ್ರಜ್ಞಾನ ಸಂಸ್ಥೆಯಲ್ಲಿ ಅರ್ಥಶಾಸ್ತ್ರ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಬ್ಯಾನರ್ಜಿ 1988 ರಲ್ಲಿ ಪಿಹೆಚ್ ಡಿ ಪಡೆದ ಹಾರ್ವಡ್ ವಿಶ್ವವಿದ್ಯಾಲಯದಲ್ಲಿ ಪ್ರಸ್ತುತ ಅರ್ಥಶಾಸ್ತ್ರದ ಪ್ರೊಫೆಸರ್ ಆಗಿ ಅಮರ್ಥ್ಯ ಸೇನ್ ಕಾರ್ಯನಿರ್ವಹಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


