ಡಿಕೆಶಿಗೆ ಅಕ್ಟೋಬರ್ 25ರವರೆಗೆ ನ್ಯಾಯಾಂಗ ಬಂಧನ: ಕೂರಲು ಕುರ್ಚಿ ಕೇಳಿದ ಶಿವಕುಮಾರ್
ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ತಿಹಾರ್ಜೈಲುಪಾಲಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಇಡಿ ವಿಶೇಷ ನ್ಯಾಯಾಲಯ ಇನ್ನು 10 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ.

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ತಿಹಾರ್ಜೈಲುಪಾಲಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಇಡಿ ವಿಶೇಷ ನ್ಯಾಯಾಲಯ ಇನ್ನು 10 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ.
ಇಂದು ಇಡಿ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಇದಾದ ಬಳಿಕ ದೆಹಲಿ ಹೈಕೋರ್ಟ್ನಲ್ಲಿ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟಾ ನೇತೃತ್ವದ ಏಕ ಸದಸ್ಯ ಪೀಠದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಅ. 25ರವರೆಗೆ ಡಿಕೆಶಿ ಇಡಿ ಅಧಿಕಾರಿಗಳ ವಶದಲ್ಲಿರಬೇಕಾಗುತ್ತದೆ. ಒಂದುವೇಳೆ ಹೈಕೋರ್ಟ್ನಲ್ಲಿ ಜಾಮೀನು ಸಿಕ್ಕರೆ ಡಿಕೆ ಶಿವಕುಮಾರ್ ಅವರಿಗೆ ನಿರಾಳವಾಗಲಿದೆ.
ಕಾಂಗ್ರೆಸ್ಟ್ರಬಲ್ಶೂಟರ್ಪರವಾಗಿ ದೆಹಲಿ ಹೈಕೋರ್ಟ್ನಲ್ಲಿ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಾಡಲಿದ್ದಾರೆ. ನಿನ್ನೆ ಕಾಂಗ್ರೆಸ್ ಟ್ರಬಲ್ ಶೂಟರ್ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ನಡೆದಿತ್ತು. ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟಾ ನೇತೃತ್ವದ ಏಕಸದಸ್ಯ ಪೀಠ ತೀರ್ಪು ನೀಡಿ ಇಂದಿಗೆ ಮುಂದೂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


