ಮಹಾರಾಷ್ಟ್ರ ಚುನಾವಣೆ: ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ ಬಿಜೆಪಿಗೆ ಸೇರ್ಪಡೆ
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಪ್ರಚಾರ ಕೊನೆಯ ಹಂತ ತಲುಪಿತ್ತಿರುವಾಗಲೇ ಕೊಂಕಣ ಭಾಗದಲ್ಲಿ ರಾಜಕೀಯವಾಗಿ ಪ್ರಬಲವಾಗಿರುವ ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಪ್ರಚಾರ ಕೊನೆಯ ಹಂತ ತಲುಪಿತ್ತಿರುವಾಗಲೇ ಕೊಂಕಣ ಭಾಗದಲ್ಲಿ ರಾಜಕೀಯವಾಗಿ ಪ್ರಬಲವಾಗಿರುವ ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮಹಾರಾಷ್ಟ್ರ ಸ್ವಾಭಿಮಾನ್ ಪಕ್ಷವನ್ನು ಆಡಳಿತಾ ರೂಢ ಬಿಜೆಪಿ ಜೊತೆಗೆ ವಿಲೀನಗೊಳಿಸಿದ್ದಾರೆ.
ಕಳೆದ ಕೆಲವು ತಿಂಗಳುಗಳಿಂದಲೂ ನಾರಾಯಣ ರಾಣೆ ಬಿಜೆಪಿ ಸೇರಲಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತಿತ್ತು. ಅದು ಇಂದು ನಿಜವಾಗಿದೆ. ರಾಣೆ ಹಿರಿಯ ಪುತ್ರ ನಿಲೇಶ್ ಹಾಗೂ ಹಾಗೂ ಅವರ ಬೆಂಬಲಿಗರು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರಿದರು.
ರಾಣೆ ಕಿರಿಯ ಪುತ್ರ ನಿತೀಶ್ ಕಂಕವ್ಲಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾಗಿದ್ದು, ಬಿಜೆಪಿ ಟಿಕೆಟ್ ನಿಂದ ಮತ್ತೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ರಾಜ್ಯಸಭಾ ಸದಸ್ಯರಾಗಿರುವ ನಾರಾಯಣ ರಾಣೆ ಅವರನ್ನು ಬಿಜೆಪಿ ಬೆಂಬಲಿಸಿದೆ ಸಹಜವಾಗಿಯೇ ಅವರು ಬಿಜೆಪಿಯ ಸದಸ್ಯರಾಗಿದ್ದಾರೆ ಎಂದು ಫಢ್ನವೀಸ್ ಹೇಳಿದ್ದಾರೆ.
ಕೆಲ ದಿನಗಳ ಹಿಂದೆ ನಿತೇಶ್ ರಾಣೆ ಬಿಜೆಪಿ ಸೇರಿದ್ದರು. ಈಗ ನಿಲೇಶ್ ಬಿಜೆಪಿ ಸೇರಿದ್ದಾರೆ. ರಾಣೆ ರಾಜ್ಯಸಭಾ ಸದಸ್ಯರಾಗಿದ್ದು ಈಗಾಗಲೇ ಬಿಜೆಪಿ ಸೇರಿದ್ದಾರೆ. ರಾಣೆ ಆಕ್ರಮಣಕಾರಿ ಹಾಗೂ ಉತ್ತಮ ನಾಯಕ ಎಂದು ಫಡ್ನವೀಸ್ ಮೆಚ್ಚುಗೆ ವ್ಯಕ್ತಪಡಿಸಿದರು.
ಚುನಾವಣೆಯಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಹೊರತಾಗಿಯೂ ನಿತೀಶ್ ವಿರುದ್ಧ ನಾರಾಯಣ ರಾಣೆಯ ಮಾಜಿ ಆಪ್ತರೊಬ್ಬರನ್ನು ಶಿವಸೇನಾ ಕಣಕ್ಕಿಳಿಸಿದೆ. 1999ರಲ್ಲಿ ಬಿಜೆಪಿ- ಸೇನಾ ಆಳ್ವಿಕೆಯ ಕಾಲದಲ್ಲಿ ನಾರಾಯಣ ರಾಣೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಆದರೆ, ಉದ್ಧವ್ ಠಾಕ್ರೆ ವಿರುದ್ಧ ಮಾತನಾಡಿದ್ದಕ್ಕೆ 2005ರಲ್ಲಿ ಶಿವಸೇನೆಯಿಂದ ಅವರನ್ನು ಉಚ್ಛಾಟಿಸಲಾಗಿತ್ತು. ನಂತರ ಕಾಂಗ್ರೆಸ್ ಸೇರಿ ಸಚಿವರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


