ಆಯುಷ್ಮಾನ್ ಭಾರತ್ ಯೋಜನೆ ಅನುಷ್ಠಾನ- ಗುಜರಾತ್, ತಮಿಳುನಾಡು ಮೊದಲ ಸ್ಥಾನದಲ್ಲಿ
ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆ ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮಗಳಲ್ಲಿ ಒಂದಾದ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತರುವಲ್ಲಿ ಗುಜರಾತ್,ತಮಿಳುನಾಡು, ಕೇರಳ ಮತ್ತು ಆಂಧ್ರ ಪ್ರದೇಶ ರಾಜ್ಯಗಳು ಮೊದಲ ಸಾಲಿನಲ್ಲಿವೆ.

ನವದೆಹಲಿ: ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆ ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮಗಳಲ್ಲಿ ಒಂದಾದ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತರುವಲ್ಲಿ ಗುಜರಾತ್,ತಮಿಳುನಾಡು, ಕೇರಳ ಮತ್ತು ಆಂಧ್ರ ಪ್ರದೇಶ ರಾಜ್ಯಗಳು ಮೊದಲ ಸಾಲಿನಲ್ಲಿವೆ.
ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯದ ಅಧಿಕಾರಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರು ಈ ಯೋಜನೆಗೆ ಚಾಲನೆ ನೀಡಿದ್ದರು.
ಹತ್ತು ಕೋಟಿ ಕುಟುಂಬಗಳ ಸುಮಾರು ೫೦ ಕೋಟಿ ಜನರಿಗೆ ವಾರ್ಷಿಕವಾಗಿ ಐದು ಲಕ್ಷ ರೂ. ತನಕ ವಿಮೆ ಒದಗಿಸುವ ಆಯುಷ್ಮಾನ್ ಭಾರತ್ ಯೋಜನೆಯಡಿ ಕೇವಲ ೯ ತಿಂಗಳ ಅವಧಿಯಲ್ಲಿ ೭೯೦೧ ಕೋಟಿ ರೂಪಾಯಿಗಳನ್ನು ಬಡವರ ಆರೋಗ್ಯ ಸುಧಾರಣೆಗಾಗಿ ವೆಚ್ಚ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


