ದೇಶ

ಐಎನ್ಎಕ್ಸ್ ಮೀಡಿಯಾ ಹಗರಣ: ವಿಚಾರಣೆ ಬಳಿಕ ಚಿದಂಬರಂ ಬಂಧನ

ಐಎನ್ಎಕ್ಸ್ ಮೀಡಿಯಾ ಹಗರಣ ಸಂಬಂಧ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ತಿಹಾರ್ ಜೈಲಿನಲ್ಲಿ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಐಎನ್ಎಕ್ಸ್ ಮೀಡಿಯಾ ಹಗರಣ: ವಿಚಾರಣೆ ಬಳಿಕ ಚಿದಂಬರಂ ಬಂಧನ
ಚಿದಂಬರಂ
Published On :

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣ ಸಂಬಂಧ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ತಿಹಾರ್ ಜೈಲಿನಲ್ಲಿ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. 

ನಿನ್ನೆಯಷ್ಟೇ ಚಿದಂಬರಂ ಅವರನ್ನು ಬಂಧನಕ್ಕೊಳಪಡಿಸಲು ದೆಹಲಿ ನ್ಯಾಯಾಲಯದ ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿತ್ತು. ಅಲ್ಲದೆ, 30 ನಿಮಿಷಗಳು ಮಾತ್ರ ಪ್ರಕರಣ ಸಂಬಂಧ ವಿಚಾರಣೆ ನಡೆಸುವಂತೆ ಸೂಚನೆ ನೀಡಿತ್ತು. 

ನ್ಯಾಯಾಲಯ ಸೂಚನೆ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಚಿದಂಬರಂ, ಅವರ ಪತ್ನಿ ನಳಿನಿ ಚಿದಂಬಂರಂ ಹಾಗೂ ಪುತ್ರ ಕಾರ್ತಿ ಚಿದಂಬರಂ ತಿಹಾರ್ ಜೈಲಿಗೆ ಹಾಜರಾಗಿದ್ದರು. ಇದರಂತೆ ವಿಚಾರಣೆ ನಡೆಸಿದ ಅಧಿಕಾರಿಗಳು ಇದೀಗ ಚಿದಂಬರಂ ಅವರನ್ನು ಬಂಧನಕ್ಕೊಳಪಡಿಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಮಹೇಶ್ ಗುಪ್ತಾ, ಸಂದೀಪ್ ಥಪ್ಲಿಯಾಳ್ ಹಾಗೂ ದೈನಿಕ್ ಜೈನ್ ಅವರಿದ್ದ ಮೂರು ಸದಸ್ಯರ ತಂಡ ಚಿದಂಬರಂ ಅವರನ್ನು ವಿಚಾರಣೆ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.