ದೇಶ

ಪಿಎಂಸಿ ಬ್ಯಾಂಕ್ ಹಗರಣ: ಠೇವಣಿ ಇಟ್ಟಿದ್ದ ಮಹಿಳಾ ವೈದ್ಯೆ ಆತ್ಮಹತ್ಯೆ

ಪಿಎಂಸಿ ಬ್ಯಾಂಕ್ ಹಗರಣ ಮತ್ತೊಬ್ಬರನ್ನು ಬಲಿಪಡೆದುಕೊಂಡಿದೆ. ತೀವ್ರ ಬಿಕ್ಕಟ್ಟಿಗೆ ಒಳಗಾಗಿರುವ ಪಿಎಂಸಿ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದ ಮುಂಬೈ ಮೂಲದ ಮಹಿಳಾ ವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪಿಎಂಸಿ ಬ್ಯಾಂಕ್ ಹಗರಣ: ಠೇವಣಿ ಇಟ್ಟಿದ್ದ ಮಹಿಳಾ ವೈದ್ಯೆ ಆತ್ಮಹತ್ಯೆ
ಪಿಎಂಸಿ ಬ್ಯಾಂಕ್ ಹಗರಣ; ಠೇವಣಿ ಇಟ್ಟಿದ್ದ ಮಹಿಳಾ ವೈದ್ಯೆ ಆತ್ಮಹತ್ಯೆ
Published On :

ಮುಂಬೈ: ಮಹಾರಾಷ್ಟ್ರ - ಪಂಜಾಬ್ ಸಹಕಾರ (ಪಿಎಂಸಿ) ಬ್ಯಾಂಕ್ ಹಗರಣ ಮತ್ತೊಬ್ಬರನ್ನು ಬಲಿಪಡೆದುಕೊಂಡಿದೆ. ತೀವ್ರ ಬಿಕ್ಕಟ್ಟಿಗೆ ಒಳಗಾಗಿರುವ ಪಿಎಂಸಿ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದ ಮುಂಬೈ ಮೂಲದ ಮಹಿಳಾ ವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೀಡಾದ ಸಂತ್ರಸ್ತೆಯನ್ನು ಡಾ. ನಿವೇದಿತಾ ಬಿಜ್ಲಾನಿ (39) ಎಂದು ಗುರುತಿಸಲಾಗಿದೆ.

ಪಿಎಂಸಿ ಠೇವಣಿದಾರ ಸಂಜಯ್ ಗುಲಾಟಿ ಆತ್ಮಹತ್ಯೆ ಮಾಡಿಕೊಂಡ ದಿನವೇ ಈ ಘಟನೆ ಬೆಳಕಿಗೆ ಬಂದಿರುವುದು ಗಮನಾರ್ಹ, ಪೊಲೀಸರ ಮಾಹಿತಿ ಪ್ರಕಾರ, ವೈದ್ಯಕೀಯ ಸ್ನಾತಕೋತ್ತರ ಪಡೆದಿರುವ ಬಿಜ್ಲಾನಿ ಸೋಮವಾರ ಸಂಜೆ  ಸಬ್ ಅರ್ಬನ್  ವರ್ಸೋವಾ ಪ್ರದೇಶದ ನಿವಾಸದಲ್ಲಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಡಾ. ನಿವೇದಿತಾ ಬಿಜ್ಲಾನಿ  ಪಿಎಂಸಿ ಬ್ಯಾಂಕಿನಲ್ಲಿ 1 ಕೋಟಿ ರೂ ಠೇವಣಿ ಇರಿಸಿದ್ದರು ಎಂದು ಆಕೆಯ ತಂದೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.