ಬ್ರೇಕಿಂಗ್: ಅಯೋಧ್ಯೆ ಪ್ರಕರಣ ಹಿಂಪಡೆಯಲು ಸುನ್ನಿ ವಕ್ಫ್ ಬೋರ್ಡ್ ನಿರ್ಧಾರ!
ಪ್ರಮುಖ ಬೆಳವಣಿಗೆಯಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಅಯೋಧ್ಯೆ ಪ್ರಕರಣದ ಅಂತಿಮ ವಿಚಾರಣೆ ನಡೆಯುತ್ತಿರುವಂತೆಯೇ ಇತ್ತ ಸುನ್ನಿ ವಕ್ಫ್ ಬೋರ್ಡ್ ತಾನು ಸಲ್ಲಿಸಿದ್ದ ಪ್ರಕರಣವನ್ನು ಹಿಂಪೆಯಲು ನಿರ್ಧರಿಸಿದೆ.

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಅಯೋಧ್ಯೆ ಪ್ರಕರಣದ ಅಂತಿಮ ವಿಚಾರಣೆ ನಡೆಯುತ್ತಿರುವಂತೆಯೇ ಇತ್ತ ಸುನ್ನಿ ವಕ್ಫ್ ಬೋರ್ಡ್ ತಾನು ಸಲ್ಲಿಸಿದ್ದ ಪ್ರಕರಣವನ್ನು ಹಿಂಪೆಯಲು ನಿರ್ಧರಿಸಿದೆ.
ಈ ಕುರಿತಂತೆ ಮಂಡಳಿಯ ಅಧ್ಯಕ್ಷರು ಹಾಗೂ ಮಧ್ಯಸ್ಥಿಕೆ ಸಮಿತಿಯ ಸದಸ್ಯರಾದ ಶ್ರೀರಾಮ್ ಪಂಚು ಅವರಿಗೆ ಪ್ರಕರಣವನ್ನು ಹಿಂಪಡೆಯಲು ಅಫಿಡವಿಟ್ ಕಳುಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಈ ಕುರಿತಂತೆ ಇಂದು ಅಂತಿಮ ವಿಚಾರಣೆ ಆರಂಭವಾಗಿದ್ದು, ಸುನ್ನಿ ವಕ್ಫ್ ಮಂಡಳಿಯ ಮೇಲ್ಮನವಿ ಹಿಂಪಡೆಯುವ ಬಗ್ಗೆ ನ್ಯಾಯಾಲಯದಲ್ಲಿ ಯಾವುದೇ ಚರ್ಚೆ ನಡೆದಿಲ್ಲ.
ಇನ್ನು ಸಂಜೆ ಐದು ಗಂಟೆಯೊಳಗೆ ಪ್ರಕರಣದ ವಿಚಾರಣೆ ಮುಕ್ತಾಯವಾಗಲಿದೆ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಸ್ಪಷ್ಟಪಡಿಸಿದ್ದು, ನಿರ್ಧರಿಸಿದ ಪಕ್ಷಗಳನ್ನು ಹೊರತುಪಡಿಸಿ ಬೇರೆಯವರ ಹಸ್ತಕ್ಷೇಪಕ್ಕೆ ಅವಕಾಶ ನೀಡಲು ಮುಖ್ಯ ನ್ಯಾಯಮೂರ್ತಿ ನಿರಾಕರಿಸಿದ್ದಾರೆ.
ವಾಸ್ತವವಾಗಿ, ವಕೀಲರು ಹೆಚ್ಚುವರಿ ಸಮಯವನ್ನು ಕೇಳಿದ್ದರು. ಆದರೆ ಈ ಕುರಿತು ಪ್ರತಿಕ್ರಿಯಿಸಿದ ಸಿಜೆಐ ಅಯೋಧ್ಯೆ ಪ್ರಕರಣದ ವಿಚಾರಣೆ ಇಂದು ಸಂಜೆ 5 ಗಂಟೆಗೆ ಕೊನೆಗೊಳ್ಳಲಿದೆ. ಹೀಗಾಗಿ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡುವಂತೆ ವಕೀಲರು ಮನವಿ ಮಾಡಿದ ಮನವಿಯನ್ನು ಸಿಜೆಐ ವಜಾಗೊಳಿಸಿದರು. ಆದರೆ ಸುನ್ನಿ ವಕ್ಫ್ ಮಂಡಳಿ ಮನವಿಯನ್ನು ಹಿಂಪಡೆಯುವ ಬಗ್ಗೆ ನ್ಯಾಯಾಲಯದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ತಿಳಿದುಬಂದಿದೆ.
Related Article
'ಇಲ್ಲಿಗೆ ಸಾಕು, ಅಯೋಧ್ಯೆ ವಿಚಾರಣೆ ಇಂದು ಸಂಜೆ 5 ಗಂಟೆಗೆ ಮುಕ್ತಾಯ': ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್
ಅಯೋಧ್ಯೆ ಭೂ ವಿವಾದ: ಇಂದೇ ವಿಚಾರಣೆ ಅಂತ್ಯ, ಎಲ್ಲರ ಚಿತ್ತ 'ಸುಪ್ರೀಂ'ನತ್ತ
ಅಯೋಧ್ಯೆ ವಿವಾದ: ನಾಳೆ 40ನೇ ಮತ್ತು ಕಡೇ ದಿನದ ವಿಚಾರಣೆ-ಸಿಜೆಐ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


