ಬಿಜೆಪಿ ನಾಥುರಾಮ್ ಗೋಡ್ಸೆಗೂ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಲಿ: ಮನೀಶ್ ತಿವಾರಿ ಸವಾಲು
ಭಾರತೀಯ ಜನತಾ ಪಾರ್ಟಿ ಮತ್ತೆ ಅಧಿಕಾರಕ್ಕೆ ಬಂದರೆ ವೀರ ಸಾವರ್ಕರ್ ಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ನೀಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗೆ ಪ್ರತಿಪಕ್ಷ ಕಾಂಗ್ರೆಸ್ ನಾಯಕರಿಂದ ವ್ಯಾಪಕ ಟೀಕೆ ಮತ್ತು ವಿರೋಧ ವ್ಯಕ್ತವಾಗುತ್ತಿದೆ.

ನಾಗ್ಪುರ: ಭಾರತೀಯ ಜನತಾ ಪಾರ್ಟಿ ಮತ್ತೆ ಅಧಿಕಾರಕ್ಕೆ ಬಂದರೆ ವೀರ ಸಾವರ್ಕರ್ ಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ನೀಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗೆ ಪ್ರತಿಪಕ್ಷ ಕಾಂಗ್ರೆಸ್ ನಾಯಕರಿಂದ ವ್ಯಾಪಕ ಟೀಕೆ ಮತ್ತು ವಿರೋಧ ವ್ಯಕ್ತವಾಗುತ್ತಿದೆ.
ವೀರ್ ಸಾವರ್ಕರ್ ಗೆ ಭಾರತ ರತ್ನ ನೀಡುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ಬಿಜೆಪಿಯ ನೀತಿ, ನಡವಳಿಕೆ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ನಾಯಕ ಮನೀಷ್ ತಿವಾರಿ, ನಾಥುರಾಮ್ ಗೋಡ್ಸೆಗೂ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಲಿ ಎಂದು ತಿರುಗೇಟು ನೀಡಿದ್ದಾರೆ.
ಸಾವರ್ಕರ್ ಗಾಂಧೀಜಿ ಹತ್ಯೆಗೆ ಸಂಚು ರೂಪಿಸಿದ್ದರು ಎಂಬ ಆರೋಪವಿದೆ. ಆದರೆ ನಾಥೂರಾಮ್ ಗೋಡ್ಸೆ ಗಾಂಧಿಯನ್ನು ಗುಂಡಿಟ್ಟು ಹತ್ಯೆಮಾಡಿದ್ದ, ಈ ವರ್ಷ ಗಾಂಧೀಜಿಯವರ 150 ನೇ ಜನ್ಮ ವರ್ಷಾಚರಣೆಯ ಸಮಯದಲ್ಲಿ ಎನ್ ಡಿ ಎ ಸರ್ಕಾರ ಭಾರತ ರತ್ನವನ್ನು ಸಾವರ್ಕರ್ ಬದಲಾಗಿ ಗೋಡ್ಸೆಗೆ ನೀಡಬೇಕು ಎಂದು ಅವರು ವ್ಯಂಗ್ಯವಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


