ಸಹೋದ್ಯೋಗಿಗಳ ಕಿರುಕುಳ: ಬಿಎಚ್‍ಇಎಲ್ ಮಹಿಳಾ ಉದ್ಯೋಗಿ ನೇಣಿಗೆ ಶರಣು
ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್ ಇಎಲ್) ಮಹಿಳಾ ಅಧಿಕಾರಿಯೊಬ್ಬರು ಸಹೋದ್ಯೋಗಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಹೈದರಾಬಾದ್: ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್ ಇಎಲ್) ಮಹಿಳಾ ಅಧಿಕಾರಿಯೊಬ್ಬರು ಸಹೋದ್ಯೋಗಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಬಿಎಚ್ ಇಎಲ್ ಸಂಸ್ಥೆಯ 33 ವರ್ಷದ ಅಕೌಂಟ್ಸ್ ಅಧಿಕಾರಿ ಗುರುವಾರ ಮಿಯಾಪುರ ಪ್ರದೇಶದ ತನ್ನ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ಅವರು ಡೆಪ್ಯೂಟಿ ಜನರಲ್ ಮ್ಯಾನೇಜರ್ ಮತ್ತು ಇತರ ಆರು ಸಹೋದ್ಯೋಗಿಗಳಿಂದ ಕಿರುಕುಳ ಅನುಭವಿಸುತ್ತಿದ್ದರೆಂದು ಪೊಲೀಸರು ತಿಳಿಸಿದ್ದಾರೆ.
ಇದೀಗ ಡೆಪ್ಯೂಟಿ ಜನರಲ್ ಮ್ಯಾನೇಜರ್ ತ್ತು ಆಕೆಯ ಇತರ ಆರು ಸಹೋದ್ಯೋಗಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಮೃತ ಮಹಿಳೆ ಪತಿಯ ದೂರಿನ ಮೇರೆಗೆ ಮಿಯಾಪುರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
ಪೊಲೀಸ್ ಇನ್ಸ್‌ಪೆಕ್ಟರ್ ವೆಂಕಟೇಶ್ ಶಮಾಲಾ ಪ್ರಕಾರ, ಮಹಿಳೆ ಮನೆಯಲ್ಲಿ ಒಬ್ಬರೇ ಇದ್ದಾಗ ನೇಣು ಹಾಕಿಕೊಂಡಿದ್ದಾರೆ.ಅವರ ಕುಟುಂಬ ಸದಸ್ಯರು ಆಗಮಿಸಿ ಅವರ ಬೆಡ್ ರೂಮಿನ ಬಾಗಿಲು ತೆಗೆದಾಗ ಛಾವಣಿಯಲ್ಲಿ ನೇತಾಡುತ್ತಿರುವ ಮಹಿಳೆಯ ಶವ ಕಾಣಿಸಿದೆ. ಮಹಿಳೆ ಭೋಪಾಲ್ ಮೂಲದವರಾಗಿದ್ದು ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಒಂದನ್ನು ಬರೆದಿಟ್ಟಿದ್ದಾರೆ.ಇದರಲ್ಲಿ ಡಿಜಿಎಂ ಮತ್ತು ಇತರ ಆರು ಭೆಲ್ ಉದ್ಯೋಗಿಗಳು ತನ್ನ ಮೇಲೆ ಬೇಹುಗಾರಿಕೆ ನಡೆಸುವ ಮೂಲಕ ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಅವರು ತಮ್ಮ ಮೊಬೈಲ್ ಫೋನ್ ಅನ್ನು ಹ್ಯಾಕ್ ಮಾಡಿದ್ದಾರೆ ಮತ್ತು ಅವರ ಕರೆಗಳನ್ನು ಟ್ಯಾಪ್ ಮಾಡಿದ್ದಾರೆ ಎಂದೂ ಹೇಳಿದ್ದಾರೆ.ಈ ಹಿಂದೆ ಭೋಪಾಲ್‌ನಲ್ಲಿ ಪೋಸ್ಟ್ ಮಾಡಿದಾಗ ಕೆಲವು ಸಹೋದ್ಯೋಗಿಗಳು ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


