ಲೈಂಗಿಕ ದೌರ್ಜನ್ಯ ಪ್ರಕರಣ: ವಿಚಾರಣೆ ಮುಂದೂಡಿಕೆ ಕೋರಿ ತೇಜ್‌ಪಾಲ್ ಸಲ್ಲಿಸಿದ್ದ ಅರ್ಜಿ ವಜಾ
ಮಾಜಿ ಮಹಿಳಾ ಸಹೋದ್ಯೋಗಿಯೊಬ್ಬರು ದಾಖಲಿಸಿದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೆಹಲ್ಕಾ ಯತಕಾಲಿಕೆಯ ಸಂಸ್ಥಾಪಕ ತರುಣ್ ತೇಜ್‌ಪಾಲ್ ಅವರ ವಿಚಾರಣೆಯು ಇದೇ ಅಕ್ಟೋಬರ್ 21 ರಿಂದ 23ರವರೆಗೆ ನಿಗದಿಯಾಗಿದೆ. ಇದೀಗ ವಿಚಾರಣೆಯನ್ನು ಮುಂದೂಡಬೇಕೆಂದು....

ಮುಂಬೈ: ಮಾಜಿ ಮಹಿಳಾ ಸಹೋದ್ಯೋಗಿಯೊಬ್ಬರು ದಾಖಲಿಸಿದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೆಹಲ್ಕಾ ಯತಕಾಲಿಕೆಯ ಸಂಸ್ಥಾಪಕ ತರುಣ್ ತೇಜ್‌ಪಾಲ್ ಅವರ ವಿಚಾರಣೆಯು ಇದೇ ಅಕ್ಟೋಬರ್ 21 ರಿಂದ 23ರವರೆಗೆ ನಿಗದಿಯಾಗಿದೆ. ಇದೀಗ ವಿಚಾರಣೆಯನ್ನು ಮುಂದೂಡಬೇಕೆಂದು ಕೋರಿ ತೇಜ್‌ಪಾಲ್ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಅಕ್ಟೋಬರ್ 21ರಿಂದ ಮೂರು ದಿನಗಳ ಕಾಲ ವಿಚಾರಣೆಯನ್ನು ನಿಗದಿಗೊಳಿಸಿ ಮಾಪುಸಾದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಅಕ್ಟೋಬರ್ 7ರ ಆದೇಶವನ್ನು ಪ್ರಶ್ನಿಸಿ ತೇಜ್‌ಪಾಲ್ ಹೈಕೋರ್ಟ್‌ಗೆ ಮೊರೆ ಹೋಗಿದ್ದರು.ತನ್ನ ವಕೀಲರು ಮತ್ತೊಂದು ಪ್ರಕರಣದಲ್ಲಿ ನಿರತರಾಗಿದ್ದಾರೆಂದು ಹೇಳಿಕೊಂಡ ಮಾಜಿ ತೆಹಲ್ಕಾ ಸಂಪಾದಕ ಡಿಸೆಂಬರ್ 2ರ ನಂತರ ವಿಚಾರಣೆ ನಡೆಸಬೇಕೆಂದು ಕೋರಿದ್ದರು.
ಆದರೆ ನ್ಯಾಯಾಲಯ ಅವರ ಅರ್ಜಿ ವಜಾ ಮಾಡಿದೆ.ಬಾಂಬೆ ಹೈಕೋರ್ಟ್‌ನ ಗೋವಾ ಪೀಠ ಈ ತೀರ್ಪು ಪ್ರಕಟಿಸಿದೆ.
ತೇಜ್‌ಪಾಲ್‌ನ ಕಿರಿಯ ಸಹೋದ್ಯೋಗಿ ಸಂತ್ರಸ್ತೆ 2013 ರಲ್ಲಿ ನಿಯತಕಾಲಿಕೆಯ ಥಿಂಕ್ ಫೆಸ್ಟ್ ಕಾರ್ಯಕ್ರಮದ ಸಂದರ್ಭದಲ್ಲಿ ಗೋವಾದ ಪಂಚತಾರಾ ಹೋಟೆಲ್‌ನಲಿಫ್ಟ್‌ನೊಳಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ತೇಜ್‌ಪಾಲ್ ಅವರನ್ನು ಗೋವಾ ಅಪರಾಧ ವಿಭಾಗ 2013 ರ ನವೆಂಬರ್ 30 ರಂದು ಬಂಧಿಸಲಾಗಿದ್ದು 2014 ರ ಮೇನಲ್ಲಿ ಜಾಮೀನಿನ ಮೇಲೆ ಹೊರಬಿಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


