ದೇಶ

'ಓಂ' ಅಲ್ಲದಿದ್ದರೇ ಬೇರೇನು ಬರೆಯಬೇಕಿತ್ತು? ರಾಹುಲ್ ಗೆ ರಾಜನಾಥ್ ಸಿಂಗ್ ಪ್ರಶ್ನೆ

ರಾಫೇಲ್ ಯುದ್ದ ವಿಮಾನಕ್ಕೆ ಫ್ರಾನ್ಸ್ ನಲ್ಲಿ ಸಲ್ಲಿಸಿದ್ದ ಪೂಜೆ ವಿಚಾರವಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿರುಗೇಟು ನೀಡಿದ್ದಾರೆ.

'ಓಂ' ಅಲ್ಲದಿದ್ದರೇ ಬೇರೇನು ಬರೆಯಬೇಕಿತ್ತು? ರಾಹುಲ್ ಗೆ ರಾಜನಾಥ್ ಸಿಂಗ್ ಪ್ರಶ್ನೆ
ರಾಜನಾಥ್ ಸಿಂಗ್ ಪೂಜೆ
Published On :

ಹರ್ಯಾಣ: ರಾಫೇಲ್ ಯುದ್ದ ವಿಮಾನಕ್ಕೆ ಫ್ರಾನ್ಸ್ ನಲ್ಲಿ   ಸಲ್ಲಿಸಿದ್ದ ಪೂಜೆ ವಿಚಾರವಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿರುಗೇಟು ನೀಡಿದ್ದಾರೆ.

ಆದ್ಯಾತ್ಮಕ್ಕೆ ಸಂಬಂಧಿಸಿದ 'ಓಂ' ಬರೆಯುವುದು ಬೇಡ ಎಂದಾದರೇ ಅಲ್ಲಿ  ನಾನು ಬೇರೆ ಏನು ಬರೆಯಬೇಕಿತ್ತು ಎಂದು ರಾಹುಲ್ ಗಾಂಧಿಗೆ ಸಿಂಗ್ ಪ್ರಶ್ನಿಸಿದ್ದಾರೆ.

ಹರ್ಯಾಣ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ರಾಜನಾಥ ಸಿಂಗ್ ರಾಫೇಲ್ ಯುದ್ದ ವಿಮಾನಕ್ಕೆ ಪೂಜೆ ಸಲ್ಲಿಸಿದ್ದ ವಿಷಯವನ್ನು ಕಾಂಗ್ರೆಸ್ ಮುಖಂಡರು ಉದ್ದೇಶ ಪೂರ್ವಕವಾಗಿ ವಿವಾದ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಕ್ಟೋಬರ್ 21 ರಂದು ಹರ್ಯಾಣದ 90 ವಿಧಾನಸಭೆ ಕ್ಷೇತ್ರಗಳಿಗೆ  ಮೊದಲ ಹಂತದಲ್ಲಿ ಮತದಾ ನಡೆಯಲಿದೆ.

ಪ್ಯಾರಿಸ್ ಗೆ ತೆರಳಿದ್ದ ರಾಜನಾಥ್ ಸಿಂಗ್ ರಾಫೇಲ್ ಯುದ್ದ ವಿಮಾನವನ್ನು ಭಾರತಕ್ಕೆ ತರುವ ಮೊದಲು ಅಲ್ಲಿಯೇ ಪೂಜೆ ಸಲ್ಲಿಸಿದ್ದಕ್ಕೆ ಕಾಂಗ್ರೆಸ್ ಮುಖಂಡರು ಆಕ್ಷೇಪ ವ್ಯಕ್ತ ಪಡಿಸಿದ್ದರು.

ಕಾಶ್ಮೀರದಲ್ಲಿ ಎಲ್ಲಿ ಮಾನವ ಹಕ್ಕುಗಳು ಉಲ್ಲಂಘನೆಯಾಗುತ್ತಿದೆ ಎಂಬ ಪ್ರಶ್ನೆಗೆ ಕಾಂಗ್ರೆಸ್ ನಾಯಕರು ಉತ್ತರ ನೀಡಬೇಕು. ಕಾಶ್ಮೀರದಲ್ಲಿ ಉಗ್ರರು ದಾಳಿ ನಡೆಸಿದಾಗ ಮಾನವ ಹಕ್ಕುಗಳು ಉಲ್ಲಂಘನೆಯಾಗುತ್ತಿದೆ. ಆ ಸಮಯದಲ್ಲೇಕೆ ನೀವು ಈ ಬಗ್ಗೆ ಮಾತನಾಡುವುದಿಲ್ಲ ಎಂದು ಪ್ರಶ್ನಿಸಿದ್ದಾರೆ. 

ಕಾಶ್ಮೀರ ನಮ್ಮ ಆಂತರಿಕ ವಿಚಾರವಾಗಿದ್ದು, ನಮ್ಮ ಪ್ರಶ್ನೆಗೆ ಕಾಂಗ್ರೆಸ್ ಉತ್ತರ ನೀಡಬೇಕು. ಇತರ ದೇಶಗಳ ಈ ಬಗ್ಗೆ ಚರ್ಚೆ ನಡೆಯುತ್ತಿದೆಯೇ? ಇತರೆ ದೇಶಗಳೊಂದಿಗೆ ಕಾಶ್ಮೀರ ವಿಚಾರ ಕುರಿತು ಚರ್ಚೆ ನಡೆಸುತ್ತೀರಾ?... ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಹಲವಾರು ಮಂದಿಯ ಪ್ರಾಣ ಹೋಗಿದೆ. ಈ ವಿಚಾರ ಸಂಬಂಧ ಕಾಂಗ್ರೆಸ್ ಗಮನ ಹರಿಸುತ್ತಿಲ್ಲ. ಕಾಂಗ್ರೆಸ್ ನಾಯಕರು ವಿಚಿತ್ರವಾದ ಪರಿಸ್ಥಿತಿಯನ್ನು ಸೃಷ್ಟಿಸುತ್ತಿದ್ದಾರೆ. ಅವರಿಗೆ ಏನಾಗಿದೆ?

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.