ಹೂಡಿಕೆಗೆ ಕರ್ನಾಟಕವೇ ಬೆಸ್ಟ್: ನೀತಿ ಆಯೋಗ
ಹೂಡಿಕೆಗಳನ್ನು ಆಕರ್ಷಿಸುವ ವಿಷಯದಲ್ಲಿ ದೇಶದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಅಗ್ರ ಸ್ಥಾನದಲ್ಲಿದೆ ಎಂದು ನೀತಿ ಆಯೋಗ ಹೇಳಿದೆ.

ನವದೆಹಲಿ: ಹೂಡಿಕೆಗಳನ್ನು ಆಕರ್ಷಿಸುವ ವಿಷಯದಲ್ಲಿ ದೇಶದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಅಗ್ರ ಸ್ಥಾನದಲ್ಲಿದೆ ಎಂದು ನೀತಿ ಆಯೋಗ ಹೇಳಿದೆ.
ಇದೇ ಮೊದಲ ಬಾರಿಗೆ ನೀತಿ ಆಯೋಗ ಬಿಡುಗಡೆ ಮಾಡಿರುವ ಹೂಡಿಕೆ ಆಕರ್ಷಿಸುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಕಟಕ್ಕೆ ಅಗ್ರ ಸ್ಥಾನ ಲಭಿಸಿದೆ. ಇನ್ನುಳಿದಂತೆ ಮಹಾರಾಷ್ಟ್ರ, ಹರ್ಯಾಣ, ಕೇರಳ, ತಮಿಳುನಾಡು, ಗುಜರಾತ್, ತೆಲಂಗಾಣ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ನಂತರದ ಸ್ಥಾನಗಳಲ್ಲಿವೆ.
ಇನ್ನು ಹೂಡಿಕೆ ಆಕರ್ಷಿಸುವ ಪಟ್ಟಿಯಲ್ಲಿ ಬಿಹಾರ,ಜಾರ್ಖಂಡ್ ಮತ್ತು ಪಂಜಾಬ್ ಕನಿಷ್ಠ ಆಕರ್ಷಣೆಯ ರಾಜ್ಯಗಳಾಗಿವೆ ಎಂದು ನೀತಿ ಆಯೋಗ ಸ್ಪಷ್ಟಪಡಿಸಿದೆ.
ಈಶಾನ್ಯ ಮತ್ತು ಗುಡ್ಡಗಾಡು ರಾಜ್ಯಗಳ ಪೈಕಿ ಮಣಿಪುರ, ಅರುಣಾಚಲ ಪ್ರದೇಶ ಮತ್ತು ತ್ರಿಪುರಾ ಮೊದಲ ಮೂರು ಅಗ್ರ ರಾಜ್ಯಗಳಾಗಿದ್ದರೆ, ಲಕ್ಷದ್ವೀಪ, ದೆಹಲಿ ಮತ್ತು ಗೋವಾ ಅತ್ಯುತ್ತಮ ಮೂರು ಕೇಂದ್ರಾಡಳಿತ ಪ್ರದೇಶಗಳಾಗಿವೆ.
ಪಟ್ಟಿ ಬಿಡುಗಡೆ ಬಳಿಕ ಮಾತನಾಡಿದ ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಅವರು, 'ಇದೇ ಮೊದಲ ಬಾರಿಗೆ ಸಿದ್ಧಪಡಿಸಲಾದ ಇಂಡಿಯಾ ಇನ್ನೋವೇಶನ್ ಇಂಡೆಕ್ಸ್ ದೇಶಾದ್ಯಂತ ನವೀನ ಪರಿಕಲ್ಪನೆಗಳು ಪ್ರವರ್ಧಮಾನಕ್ಕೆ ಬರಲು ಅನುಕೂಲಕರ ಪರಿಸರವನ್ನು ಉಂಟುಮಾಡಲು ಸಹಾಯ ಮಾಡುತ್ತದೆ. ಇದು ರಾಜ್ಯಗಳೊಂದಿಗೆ ಅದರ ಕಾರ್ಯಕ್ಷಮತೆಯನ್ನು ಗುರುತಿಸಲು ಸಹಕಾರಿ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


