ದೇಶ

ಮಹಾರಾಷ್ಟ್ರದಲ್ಲಿ ಅಮಿತ್ ಶಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಶನಿವಾರ ತುರ್ತು ಭೂಸ್ಪರ್ಶ ಮಾಡಿದೆ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದಲ್ಲಿ ಅಮಿತ್ ಶಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಅಮಿತ್ ಶಾ
Published On :

ಮುಂಬೈ: ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಶನಿವಾರ ತುರ್ತು ಭೂಸ್ಪರ್ಶ ಮಾಡಿದೆ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕೊನೆಯ ದಿನದ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಅಮಿತ್ ಶಾ ಅವರ ಹೆಲಿಕಾಪ್ಟರ್ ಇಂದು ಮಧ್ಯಾಹ್ನ ನಾಸಿಕ್ ನ ಓಜರ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಮಿತ್ ಶಾ ಅವರ ಹೆಲಿಕಾಪ್ಟರ್ ನಾಸಿಕ್ ನಿಂದ 70 ಕಿಲೋಮೀಟರ್ ದೂರದಲ್ಲಿರುವ ಅಹ್ಮದ್ ನಗರ್  ಜಿಲ್ಲೆಯ ಅಕೋಲೆಗೆ ತೆರಳುತ್ತಿತ್ತು, ಅಲ್ಲಿ ಶಾ ಅವರು ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಬೇಕಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ ಪ್ರತಿಕೂಲ ಹವಾಮಾನದಿಂದಾಗಿ ಮಧ್ಯಾಹ್ನ 2: 25 ಕ್ಕೆ ಓಜರ್ ವಿಮಾನ ನಿಲ್ದಾಣದಲ್ಲಿ ಚಾಪರ್ ಇಳಿಸಲು ಪೈಲಟ್ ನಿರ್ಧರಿಸಿದರು. ನಂತರ ಸುಮಾರು 40 ನಿಮಿಷಗಳ ಬಳಿಕ ಶಾ ಹೆಲಿಕಾಪ್ಟರ್ ಅಹ್ಮನ್ ನಗರಕ್ಕೆ ಪ್ರಯಾಣ ಬೆಳಸಿತು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.