1964 ರಲ್ಲಿ ಭರವಸೆ ನೀಡಿದ್ದರೂ ಆರ್ಟಿಕಲ್ 370 ರದ್ದವಿ ವಿಷಯದಲ್ಲಿ ಕಾಂಗ್ರೆಸ್ ವಿಫಲ: ಪ್ರಧಾನಿ ಮೋದಿ
ಕಾಂಗ್ರೆಸ್ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಆರ್ಟಿಕಲ್ 370 ರದ್ದುಗೊಳಿಸುವುದಾಗಿ ಸಂಸತ್ ನಲ್ಲಿ 1964 ರಲ್ಲಿ ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ ಆ ವಿಷಯದಲ್ಲಿ ಕಾಂಗ್ರೆಸ್ ವಿಫಲವಾಗಿದೆ

ರೆವಾರಿ: ಕಾಂಗ್ರೆಸ್ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ ಆರ್ಟಿಕಲ್ 370 ರದ್ದುಗೊಳಿಸುವುದಾಗಿ ಸಂಸತ್ ನಲ್ಲಿ 1964 ರಲ್ಲಿ ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ ಆ ವಿಷಯದಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಅ.19 ರಂದು ರೆವಾರಿಯಲ್ಲಿ ಚುನಾವಣಾ ಪ್ರಚಾರದ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, 1964 ರ ಸಂಸತ್ ಕಲಾಪವನ್ನು ಉಲ್ಲೇಖಿಸಿದ್ದಾರೆ. 1964 ರಲ್ಲಿ ಆರ್ಟಿಕಲ್ 370 ರದ್ದತಿಗೆ ಸಂಸತ್ ನಲ್ಲಿ ಬೇಡಿಕೆ ಹೆಚ್ಚಿತ್ತು. ಕಾಂಗ್ರೆಸ್ ನಲ್ಲಿದ್ದ ನಾಯಕತ್ವ ಇದೇ ವಿಷಯವಾಗಿ ಎರಡು ಬಣಗಳಾಗಿತ್ತು. ಆಗ ಕಾಂಗ್ರೆಸ್ ನವರು ಇನ್ನೊಂದು ವರ್ಷದ ಅವಧಿಯಲ್ಲಿ ಆರ್ಟಿಕಲ್ 370 ಗೆ ಅಂತ್ಯ ಹಾಡುವ ಭರವಸೆ ನೀಡಿದ್ದರು. ಆದರೆ ಈ ಭರವಸೆಯನ್ನು ಈಡೇರಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂದು ಮೋದಿ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


