ದೇಶ

43 ದಿನಗಳಲ್ಲಿ 5 ಕೆಜಿ ತೂಕ ಕಳೆದುಕೊಂಡ ಮಾಜಿ ಸಚಿವ ಚಿದಂಬರಂ

ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಕಳೆದ ಎರಡು ತಿಂಗಳಿನಿಂದ ಜೈಲಿನಲ್ಲಿರುವ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ 5 ಕೆ.ಜಿ. ತೂಕ ಕಳೆದುಕೊಂಡಿದ್ದಾರೆ.

43 ದಿನಗಳಲ್ಲಿ 5 ಕೆಜಿ ತೂಕ ಕಳೆದುಕೊಂಡ ಮಾಜಿ ಸಚಿವ ಚಿದಂಬರಂ
ಚಿದಂಬರಂ
Published On :

ನವದೆಹಲಿ:  ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಕಳೆದ ಎರಡು ತಿಂಗಳಿನಿಂದ ಜೈಲಿನಲ್ಲಿರುವ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ 5 ಕೆ.ಜಿ. ತೂಕ ಕಳೆದುಕೊಂಡಿದ್ದಾರೆ.

ಜೈಲಿನ ಪ್ರಕರಣದಲ್ಲಿ ಜಾಮೀನು ನೀಡುವಂತೆ ಸುಪ್ರೀಂಕೋರ್ಟ್ನಲ್ಲಿ ಚಿದಂಬರಂ ಪರ ವಕೀಲರು ಮನವಿ ಮಾಡಿದ್ದು ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿದೆ.

ಇನ್ನು ಚಳಿಗಾಲದಲ್ಲಿ ಅವರ ಆರೋಗ್ಯ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆ ಇದೆ.  73.5 ಕೆಜಿ ಇದ್ದ ಚಿದಂಬರಂ 68.5 ಕೆಜಿಗೆ ಇಳಿದಿದ್ದಾರೆ,  ಈಗಾಗಲೇ 43 ದಿನಗಳು ಜೈಲಿನಲ್ಲಿರುವ ಚಿದಂಬರಂ ಆರೋಗ್ಯ ದೃಷ್ಟಿಯಿಂದ ಜಾಮೀನು ನೀಡಬೇಕು ಎಂದು ಅವರ ಪರ ವಕೀಲ ಕಪಿಲ್ ಸಿಬಲ್ ಮನವಿ ಮಾಡಿದ್ದರು .ಈಗ ಕೋರ್ಟ್ ತೀರ್ಪು ಕಾಯ್ದಿಸಿರುವ ಕಾರಣ ಎಲ್ಲರ ಚಿತ್ತ ನ್ಯಾಯಾಲಯದತ್ತ ನೆಟ್ಟಿದೆ 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.