ಕಮಲೇಶ್ ತಿವಾರಿ ಹತ್ಯೆ ಪ್ರಕರಣ: ನಾಗ್ಪುರದಲ್ಲಿ ಮತ್ತೊಬ್ಬ ಆರೋಪಿ ಬಂಧನ
ಹಿಂದೂ ಮಹಾಸಭಾದ ಮಾಜಿ ನಾಯಕ ಕಮಲೇಶ್ ತಿವಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರು ನಾಗ್ಪುರದಲ್ಲಿ ಮತ್ತೊಬ್ಬ ಆರೋಪಿಯನ್ನು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.

ನಾಗ್ಪುರ: ಹಿಂದೂ ಮಹಾಸಭಾದ ಮಾಜಿ ನಾಯಕ ಕಮಲೇಶ್ ತಿವಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರು ನಾಗ್ಪುರದಲ್ಲಿ ಮತ್ತೊಬ್ಬ ಆರೋಪಿಯನ್ನು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.
ಉತ್ತರಪ್ರದೇಶ ಪೊಲೀಸರು ನೀಡಿದ್ದ ಮಾಹಿತಿ ಮೇರೆಗೆ ಆರೋಪಿಯನ್ನು ಎಟಿಎಸ್ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. ಬಂಧಿತ ವ್ಯಕ್ತಿಯ ಹೆಸರನ್ನು ಹಾಗೂ ಈ ಕುರಿತ ಮಾಹಿತಿಯನ್ನು ಬಹಿರಂಗಪಡಿಸಲು ಪೊಲೀಸರು ನಿರಾಕರಿಸಿದ್ದಾರೆ.
ಹಿಂದೂ ಸಮಾಜ ಪಕ್ಷದ ನಾಯಕರಾಗಿದ್ದ ತಿವಾರಿಯವರನ್ನು ಕೆಲ ದಿನಗಳ ಹಿಂದಷ್ಟೇ ಲಖನೌನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಈವರೆಗೂ ಐವರನ್ನು ಬಂಧನಕ್ಕೊಳಪಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


