ದೇಶ

ಸಂಚಾರಿ ನಿಯಮ ಉಲ್ಲಂಘನೆ: ಪುದುಚೇರಿ ಸಿಎಂ - ಗವರ್ನರ್​ ನಡುವೆ ಟ್ವೀಟ್​ ವಾರ್, ಏಟು-ಎದಿರೇಟು!

ಸಂಚಾರಿ ನಿಯಮ ಉಲ್ಲಂಘಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪುದುಚೇರಿ ಮುಖ್ಯಮಂತ್ರಿ ವಿ​. ನಾರಾಯಣಸ್ವಾಮಿ ಮತ್ತು ಲೆಫ್ಟಿನೆಂಟ್ ಗವರ್ನರ್ ಕಿರಣ್​ ಬೇಡಿ ನಡುವೆ ಭಾನುವಾರ ಭರ್ಜರಿ ಟ್ವೀಟ್​ ವಾರ್ ನಡೆದಿದೆ.

ಸಂಚಾರಿ ನಿಯಮ ಉಲ್ಲಂಘನೆ: ಪುದುಚೇರಿ ಸಿಎಂ - ಗವರ್ನರ್​ ನಡುವೆ ಟ್ವೀಟ್​ ವಾರ್, ಏಟು-ಎದಿರೇಟು!
ನಾರಾಯಣಸ್ವಾಮಿ - ಕಿರಣ್ ಬೇಡಿ
Published On :

ಪುದುಚೇರಿ: ಸಂಚಾರಿ ನಿಯಮ ಉಲ್ಲಂಘಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪುದುಚೇರಿ ಮುಖ್ಯಮಂತ್ರಿ ವಿ​. ನಾರಾಯಣಸ್ವಾಮಿ ಮತ್ತು ಲೆಫ್ಟಿನೆಂಟ್ ಗವರ್ನರ್ ಕಿರಣ್​ ಬೇಡಿ ನಡುವೆ ಭಾನುವಾರ ಭರ್ಜರಿ ಟ್ವೀಟ್​ ವಾರ್ ನಡೆದಿದೆ.

ಸಿಎಂ ನಾರಾಯಣಸ್ವಾಮಿ ಅವರು ಚುನಾವಣಾ ಪ್ರಚಾರದ ಬೈಕ್​ ರ‍್ಯಾಲಿ ವೇಳೆ ಹೆಲ್ಮೆಟ್ ಧರಿಸದೆ ಸಂಚಾರಿ ನಿಯಮ ಉಲ್ಲಂಘಿಸಿದ್ದಾರೆ ಎಂದು ಕಿರಣ್​ ಬೇಡಿ ಅವರು ಆರೋಪಿಸಿದರೆ, ಇನ್ನೊಬ್ಬರಿಗೆ ಬೋಧನೆ ಮಾಡುವ ಬದಲು ಅದನ್ನು ಅಳವಡಿಸಿಕೊಳ್ಳಿ ಎಂದು ಸಿಎಂ ತಿರುಗೇಟು ನೀಡಿದ್ದಾರೆ.

ಸಂಚಾರಿ ನಿಯಮ ಉಲ್ಲಂಘಿಸಿದ ಸಿಎಂ ನಾರಾಯಣಸ್ವಾಮಿ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕಿರಣ್​ ಬೇಡಿಯವರು ಪುದುಚೇರಿಯ ಪೊಲೀಸ್​ ಮಹಾ ನಿರ್ದೇಶಕರಾದ ಬಾಲಾಜಿ ಶ್ರೀವಾಸ್ತವ ಅವರಿಗೆ ಮನವಿ ಮಾಡಿದ್ದಾರೆ. ಸುಪ್ರೀಂಕೋರ್ಟ್​ ಹಾಗೂ ಮದ್ರಾಸ್​ ಹೈಕೋರ್ಟ್​ ಕಾಯಿದೆ ಬಗ್ಗೆ ಸ್ಪಷ್ಟವಾಗಿ ಹೇಳಿದ್ದರೂ ಸಿಎಂ ನಿಯಮ ಉಲ್ಲಂಘಿಸಿದ್ದಾರೆ ಎಂದು ಕಿರಣ್ ಬೇಡಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.