ಕರ್ತಾರ್‌ಪುರ್ ಕಾರಿಡಾರ್ ಉದ್ಘಾಟನೆಗೆ ಆಗಮಿಸಲು ಡಾ.ಸಿಂಗ್ ಒಪ್ಪಿಕೊಂಡಿದ್ದಾರೆ: ಪಾಕಿಸ್ತಾನ
ಭಾರತ ಮತ್ತು ಪಾಕಿಸ್ತಾನದ ಸಿಖ್ ಧರ್ಮೀಯರ ಪವಿತ್ರ ಯಾತ್ರಾ ಕ್ಷೇತ್ರ ಕರ್ತಾರ್‌ಪುರ್ ಕಾರಿಡಾರ್ ಉದ್ಘಾಟನೆಗೆ ಆಗಮಿಸಲು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಒಪ್ಪಿಕೊಂಡಿದ್ದಾರೆ ಎಂದು ಪಾಕಿಸ್ತಾನ ಹೇಳಿದೆ.

ಲಾಹೋರ್: ಭಾರತ ಮತ್ತು ಪಾಕಿಸ್ತಾನದ ಸಿಖ್ ಧರ್ಮೀಯರ ಪವಿತ್ರ ಯಾತ್ರಾ ಕ್ಷೇತ್ರ ಕರ್ತಾರ್‌ಪುರ್ ಕಾರಿಡಾರ್ ಉದ್ಘಾಟನೆಗೆ ಆಗಮಿಸಲು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಒಪ್ಪಿಕೊಂಡಿದ್ದಾರೆ ಎಂದು ಪಾಕಿಸ್ತಾನ ಹೇಳಿದೆ.
ಗುರುನಾನಕ್ ಅವರ 550 ನೇ ಜಯಂತಿ ಅಂಗವಾಗಿ ಭಾರತ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರನ್ನು ಕರ್ತಾರ್‌ಪುರ್ ಗೆ ಭೇಟಿ ನೀಡಲು ಆಹ್ವಾನಿಸಲಾಗಿದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಷಾ ಮೊಹಮ್ಮದ್ ಖುರೇಷಿ ತಿಳಿಸಿದ್ದಾರೆ.
ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ತಮ್ಮ ಆಹ್ವಾನ ಒಪ್ಪಿಕೊಂಡಿರುವುದಕ್ಕಾಗಿ ಡಾ. ಮನಮೋಹನ್ ಸಿಂಗ್ ಅವರಿಗೆ ಖುರೇಷಿ ಧನ್ಯವಾದ ಸಲ್ಲಿಸಿದ್ದಾರೆ. 'ಡಾ. ಮನಮೋಹನ್ ಸಿಂಗ್ ಅವರು ಸಹ ಈ ಸಂಬಂಧ ತಮಗೆ ಪತ್ರ ಬರೆದಿದ್ದು, ಪತ್ರದಲ್ಲಿ, ಮುಖ್ಯ ಅತಿಥಿಯಾಗಿ ಅಲ್ಲ, ಸಾಮಾನ್ಯ ವ್ಯಕ್ತಿಯಾಗಿ ಕರ್ತಾರ್‌ಪುರಕ್ಕೆ ಭೇಟಿ ನೀಡುವುದಾಗಿ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದಾರೆ.
ಅಂತೆಯೇ ಡಾ. ಮನಮೋಹನ್ ಸಿಂಗ್ ಅವರ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ ಎಂದು ಖುರೇಷಿ ಹೇಳಿದ್ದಾರೆ.
ಈ ಹಿಂದೆ ಕರ್ತಾರ್‌ಪುರ್‌ಗೆ ಭೇಟಿ ನೀಡಲು ನಿರಾಕರಿಸಿದ್ದ ಡಾ. ಮನಮೋಹನ್ ಸಿಂಗ್ ನಂತರ ತಮ್ಮ ನಿರ್ಧಾರ ಬದಲಾಯಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


