6 ಗಂಟೆಯವರೆಗೂ ಮಹಾರಾಷ್ಟ್ರದಲ್ಲಿ ಶೇ. 55, ಹರಿಯಾಣದಲ್ಲಿ ಶೇ. 63ರಷ್ಟು ಮತದಾನ
ಸಂಜೆ 6 ಗಂಟೆಯವರೆಗೂ ಮಹಾರಾಷ್ಟ್ರದಲ್ಲಿ ಶೇ. 55ರಷ್ಟು ಹಾಗೂ ಹರಿಯಾಣದಲ್ಲಿ ಶೇ. 63ರಷ್ಟು ಮತದಾನವಾಗಿರುವ ಬಗ್ಗೆ ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ಮಿನಿ ಮಹಾಸಮರ ಎಂದೇ ಪರಿಗಣಿಸಲಾಗಿರುವ ಮಹಾರಾಷ್ಟ್ರ ಹಾಗೂ ಹರಿಯಾಣ ವಿಧಾನಸಭಾ ಮತದಾನ ಸೂರ್ಯ ನೆತ್ತಿ ಮೇಲೆ ಬರುತ್ತಿದ್ದಂತೆ ಚುರುಕುಗೊಂಡಿದ್ದು, ಬಾಲಿವುಡ್ ನಟ, ನಟಿಯರು, ರಾಜಕೀಯ ಮುಖಂಡರು ಮತಗಟ್ಟೆಗಳ ಬಳಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.
ಸಂಜೆ 6 ಗಂಟೆಯವರೆಗೂ ಮಹಾರಾಷ್ಟ್ರದಲ್ಲಿ ಶೇ. 55ರಷ್ಟು ಹಾಗೂ ಹರಿಯಾಣದಲ್ಲಿ ಶೇ. 63ರಷ್ಟು ಮತದಾನವಾಗಿರುವ ಬಗ್ಗೆ ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
ಕ್ರಿಕೆಟ್ ದಂತಕಥೆ ಸಚಿನ್ ತೆಂಡೊಲ್ಕರ್, ಬಾಲಿವುಡ್ ನಟ ಅಮಿರ್ ಖಾನ್, ನಟಿ ಮಾಧುರಿ ಧೀಕ್ಷಿತ್, ರವಿಕಿಶನ್ ಮತ್ತಿತರರು ತಮ್ಮ ಕುಟುಂಬ ಸದಸ್ಯರೊಂದಿಗೆ ಬಾಂದ್ರಾದಲ್ಲಿ ತಮ್ಮ ಹಕ್ಕು ಚಲಾಯಿಸಿದರು.
ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ನಿತಿನ್ ಗಡ್ಕರಿ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಆರ್ ಎಸ್ ಎಸ್ ಸರಸಂಘ ಸಂಚಾಲಕ ಮೋಹನ್ ಭಾಗವತ್ ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಅವರ ಪತ್ನಿ ನಾಗ್ಪುರದಲ್ಲಿ ತಮ್ಮ ಹಕ್ಕು ಚಲಾಯಿಸಿದರು.ಎನ್ ಸಿಪಿ ಮುಖಂಡರಾದ ಅಜಿತ್ ಪವಾರ್, ಫ್ರುಪುಲ್ ಪುಟೇಲ್ ಹಾಗೂ ಸುಪ್ರೀಯಾ ಸುಳೆ ತಮ್ಮ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತ ಚಲಾಯಿಸಿದರು.
ಹರಿಯಾಣದ 90 ವಿಧಾನಸಭೆ ಹಾಗೂ ಮಹಾರಾಷ್ಟ್ರದ 288 ಸ್ಥಾನಗಳಿಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೂ ಮುಂದುವರೆಯಲಿದೆ. ಅಕ್ಟೋಬರ್ 24 ರಂದು ಮತಗಳ ಎಣಿಕೆ ನಡೆಯಲಿದೆ. ಮತಗಟ್ಟೆಗಳ ಬಳಿ ಬಿಗಿ ಬಂಧೋಬಸ್ತ್ ಏರ್ಪಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


