ಬ್ಯಾಂಕ್ ವಿಲೀನ ವಿರೋಧಿಸಿ ನಾಳೆ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ
10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ವಿಲೀನಗೊಳಿಸುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಹಾಗೂ ವಿವಿಧಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

ಹೈದರಾಬಾದ್: 10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ವಿಲೀನಗೊಳಿಸುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಹಾಗೂ ವಿವಿಧಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.
ನಾಳೆ ದೇಶಾದ್ಯಂತ ಬ್ಯಾಂಕ್ ನೌಕರರು ಮುಷ್ಕರ ನಡೆಸಲಿದ್ದಾರೆ ಎಂದು ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ (ಎಐಬಿಇಎ) ಮತ್ತು ಭಾರತದ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ (ಬಿಇಎಫ್ಐ) ತಿಳಿಸಿದೆ.
ಆರು ಪ್ರಮುಖ ಬೇಡಿಕೆಗಾಳಾದ –ಬ್ಯಾಂಕಿಂಗ್ ಸುಧಾರಣಾ ಕ್ರಮದ ನೆಪದಲ್ಲಿ ಬ್ಯಾಂಕ್ ಗಳ ವಿಲೀನ ತಡೆ, ಕೆಟ್ಟ ಸಾಲಗಳ ವಾಪಸಾತಿ ಖಾತರಿ, ಸುಸ್ತಿದಾರರ ವಿರುದ್ಧ ಕಠಿಣ ಕ್ರಮ - ಗ್ರಾಹಕರಿಗೆ ದಂಡದಂತಹ ಕಿರುಕುಳ ತಡೆ, ಸೇವಾ ಶುಲ್ಕ ಹೆಚ್ಚಳ ನಿಯಂತ್ರಣ, ಠೇವಣಿಗಳ ಮೇಲಿನ ಬಡ್ಡಿ ದರ ಹೆಚ್ಚಳ, ಉದ್ಯೋಗ ಭದ್ರತೆಗೆ ಆಗ್ರಹಿಸಿ ನಾಳೆ ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಮುಷ್ಕರ ನಡೆಸಲಾಗುವುದು ಎಂದು ಎಐಬಿಎ ಪ್ರಧಾನ ಕಾರ್ಯದರ್ಶಿ ವೆಂಕಟಾಚಲಂ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


