ದೇಶ

ಕಾಂಗ್ರೆಸ್ ನ ಮಾಜಿ ರಾಜ್ಯಸಭಾ ಸದಸ್ಯ ಕೆ ಸಿ ರಾಮಮೂರ್ತಿ ಬಿಜೆಪಿ ಸೇರ್ಪಡೆ

ಕಾಂಗ್ರೆಸ್‌ನ ಮಾಜಿ ರಾಜ್ಯಸಭಾ ಸದಸ್ಯ ಕೆ ಸಿ ರಾಮಮೂರ್ತಿ ಇಲ್ಲಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಸೇರ್ಪಡೆಯಾದರು.

ಕಾಂಗ್ರೆಸ್ ನ ಮಾಜಿ ರಾಜ್ಯಸಭಾ ಸದಸ್ಯ ಕೆ ಸಿ ರಾಮಮೂರ್ತಿ ಬಿಜೆಪಿ ಸೇರ್ಪಡೆ
ಕಾಂಗ್ರೆಸ್ ನ ಮಾಜಿ ರಾಜ್ಯಸಭಾ ಸದಸ್ಯ ಕೆ ಸಿ ರಾಮಮೂರ್ತಿ ಬಿಜೆಪಿ ಸೇರ್ಪಡೆ
Published On :

ನವದೆಹಲಿ: ಕಾಂಗ್ರೆಸ್‌ನ ಮಾಜಿ ರಾಜ್ಯಸಭಾ ಸದಸ್ಯ ಕೆ ಸಿ ರಾಮಮೂರ್ತಿ ಇಲ್ಲಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಸಿಂಗ್, ಭೂಪೇಂದ್ರ ಯಾದವ್ ಮತ್ತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಉಪಸ್ಥಿತರಿದ್ದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ನೀತಿಗಳನ್ನು ಶ್ಲಾಘಿಸಿದ ರಾಮಮೂರ್ತಿ, ಮೋದಿ ಅವರ ಯೋಜನೆಗಳು ದೇಶಾದ್ಯಂತ ಯಶಸ್ವಿಯಾಗಿ ಗೌರವಿಸಲ್ಪಟ್ಟಿವೆ ಎಂದು ಸಮರ್ಥಿಸಿಕೊಂಡರು. ಸೇರ್ಪಡೆಯಾದ ನಂತರ  ರಾಮಮೂರ್ತಿ ಪಕ್ಷದ ಕಾರ್ಯಾಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿಯಾದರು. ರಾಮಮೂರ್ತಿ ಅವರು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.