ದೇಶ

ಸಮಯಕ್ಕೆ ಸರಿಯಾಗಿ ಬಾರದ ಆ್ಯಂಬುಲೆನ್ಸ್: ಗರ್ಭಿಣಿ ನಟಿ, ಮಗು ಸಾವು!

ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ಬಾರದ ಹಿನ್ನಲೆಯಲ್ಲಿ ಖ್ಯಾತ ನಟಿ ಮತ್ತು ಆಕೆಯ ನವಜಾತ ಶಿಶು ಸಾವನ್ನಪ್ಪಿರುವ ಧಾರುಣ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಸಮಯಕ್ಕೆ ಸರಿಯಾಗಿ ಬಾರದ ಆ್ಯಂಬುಲೆನ್ಸ್: ಗರ್ಭಿಣಿ ನಟಿ, ಮಗು ಸಾವು!
ಸಂಗ್ರಹ ಚಿತ್ರ
Published On :

ಮುಂಬೈ: ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್ ಬಾರದ ಹಿನ್ನಲೆಯಲ್ಲಿ ಖ್ಯಾತ ನಟಿ ಮತ್ತು ಆಕೆಯ ನವಜಾತ ಶಿಶು ಸಾವನ್ನಪ್ಪಿರುವ ಧಾರುಣ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದ ಮರಾಠಿ ನಟಿ ಪೂಜಾ ಝುಂಜರ್ ಎಂಬುವವರು ದುರಂತ ಸಾವು ಕಂಡಿದ್ದು, ಸಮಯಕ್ಕೆ ಸರಿಯಾಗಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರೆ ಆಕೆಯ ಮಗು ಮತ್ತು ಆಕೆಯನ್ನು ಬದುಕಿಸಬಹುದಿತ್ತು ಎಂದು ಕುಟುಂಬಸ್ಥರು ಆಳಲು ತೋಡಿಕೊಂಡಿದ್ದಾರೆ.

ಮೂಲತಃ ಮಹಾರಾಷ್ಟ್ರದ ರಾಜಧಾನಿ ಮುಂಬೈನಿಂದ ಸುಮಾರು 600 ಕಿಮೀ ದೂರದಲ್ಲಿ ಹಿಂಗೋಲಿ ಜಿಲ್ಲೆಯ ನಿವಾಸಿಯಾಗಿರುವ ಪೂಜಾ ಅವರು ಮರಾಠಿ ಚಿತ್ರನಟಿ. ಎರಡು ಮೂರು ಚಿತ್ರಗಳಲ್ಲಿ ನಟಿಸಿರುವ ಅವರು ಈಗಷ್ಟೇ ಮರಾಠಿ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸುತ್ತಿದ್ದರು. ಈ ಹೊತ್ತಿನ್ನಲ್ಲಿ ಅವರು ಗರ್ಭಿಣಿಯಾದ ಕಾರಣ ಅವರು ನಟನೆಗೆ ತಾತ್ಕಾಲಿಕ ಬ್ರೇಕ್ ಹಾಕಿದ್ದರು. ಭಾನುವಾರ ರಾತ್ರಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಕುಟುಂಬಸ್ಥರು ಆ್ಯಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಸಾಕಷ್ಟು ಹೊತ್ತು ಕಾದರೂ ಆ್ಯಂಬುಲೆನ್ಸ್ ಬಾರದ ಕಾರಣ ಗೋರೆಗಾಂವ್ ನಲ್ಲಿರುವ ಸ್ಥಳೀಯ ಪ್ರಾಥಮಿಕ ಆರೋಗ್ಯಕೇಂದ್ರಕ್ಕೆ ದಾಖಲಿಸಿದ್ದಾರೆ.

ಮಧ್ಯರಾತ್ರಿ 2 ಗಂಟೆ ಹೊತ್ತಿಗೆ ಪೂಜಾ ಅವರಿಗೆ ಹೆರಿಗೆಯಾಗಿದ್ದು, ಹುಟ್ಟಿದ ಕೆಲವೇ ಕ್ಷಣಗಳಲ್ಲಿ ಮಗು ಸಾವನ್ನಪ್ಪಿದೆ. ಈ ವೇಳೆ ವೈದ್ಯರು ಪೂಜಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದೊಡ್ಡ ಆಸ್ಪತ್ರೆಗೆ ಸೇರಿಸುವಂತೆ ಸಲಹೆ ನೀಡಿದ್ದಾರೆ. ಕುಟುಂಬಸ್ಥರು ಆ್ಯಂಬುಲೆನ್ಸ್ ಗೆ ಕರೆ ಮಾಡಿದ್ದಾರೆಯಾದರೂ ಸಮಯಕ್ಕೆ ಸರಿಯಾಗೆ ಆ್ಯಂಬುಲೆನ್ಸ್ ಬಂದಿಲ್ಲ. ಈ ವೇಳೆ ಖಾಸಗಿ ಆ್ಯಂಬುಲೆನ್ಸ್ ಗೆ ಕರೆ ಮಾಡಲಾಯಿತು. ಆ್ಯಂಬುಲೆನ್ಸ್ ಬಂದು ಪೂಜಾ ಅವರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಆಕೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

ಆ್ಯಂಬುಲೆನ್ಸ್ ಸರಿಯಾದ ಸಮಯಕ್ಕೆ ಬಂದಿದ್ದರೆ ಪೂಜಾ ಹಾಗೂ ಆಕೆಯ ಮಗು ಬದುಕುಳಿಯುತ್ತಿತ್ತು ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.