ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ನೌಕರಿ ಇಲ್ಲ: ಅಸ್ಸಾಂ ಸರ್ಕಾರ ಮಹತ್ವದ ನಿರ್ಧಾರ!
2021ರಿಂದ ಜಾರಿಗೆ ಬರುವಂತೆ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.

ಗುವಾಹತಿ: 2021ರಿಂದ ಜಾರಿಗೆ ಬರುವಂತೆ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.
ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು.
ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ.
ಮುಖ್ಯಮಂತ್ರಿ ಸರ್ಬಾನಂದ್ ಸೋನೊವಾಲ್ ಈ ಮಾಹಿತಿಯನ್ನು ಅಧಿಕೃತಗೊಳಿಸಿದ್ದು, 2021 ಜನವರಿಯಿಂದ ಜಾರಿಗೆ ಬರುವಂತೆ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರನ್ನು ಸರ್ಕಾರಿ ಉದ್ಯೋಗಕ್ಕೆ ಪರಿಗಣಿಸಲಾಗುವುದಿಲ್ಲ, ಜನಸಂಖ್ಯಾ ನಿಯಂತ್ರಣ ಇದರ ಹಿಂದಿರುವ ಪ್ರಮುಖ ಉದ್ದೇಶ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


