ತುರ್ತು ಆರ್ಥಿಕ ಬದಲಾವಣೆಗಳಿಗೆ ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಒತ್ತಾಯ
ಭಾರತದ ಬ್ಯಾಂಕಿಂಗ್ ಬಿಕ್ಕಟ್ಟಿನ ಬಗ್ಗೆ ನೊಬೆಲ್ ಪ್ರಶಸ್ತಿ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಆತಂಕ ವ್ಯಕ್ತಪಡಿಸಿದ್ದು, ಆರ್ಥಿಕ ಕ್ಷೇತ್ರಗಳಲ್ಲಿ ತುರ್ತು ಬದಲಾವಣೆಗಳಿಗೆ ಒತ್ತಾಯಿಸಿದ್ದಾರೆ.

ನವದೆಹಲಿ: ಭಾರತದ ಬ್ಯಾಂಕಿಂಗ್ ಬಿಕ್ಕಟ್ಟಿನ ಬಗ್ಗೆ ನೊಬೆಲ್ ಪ್ರಶಸ್ತಿ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಆತಂಕ ವ್ಯಕ್ತಪಡಿಸಿದ್ದು, ಆರ್ಥಿಕ ಕ್ಷೇತ್ರಗಳಲ್ಲಿ ತುರ್ತು ಬದಲಾವಣೆಗಳಿಗೆ ಒತ್ತಾಯಿಸಿದ್ದಾರೆ.
ಪರಿಸ್ಥಿತಿಯನ್ನು ನಿಭಾಯಿಸುವುದಕ್ಕೆ ತುರ್ತು ಬದಲಾವಣೆಗಳು ಅಗತ್ಯ ಎಂದು ಅಭಿಜಿತ್ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ. ಅ.22 ರಂದು ಅವರು ನವದೆಹಲಿಯಲ್ಲಿ ಮಾಧ್ಯಮ ಸಂವಾದಲ್ಲಿ ಭಾಗವಹಿಸಿ ಮಾತನಾಡಿದರು.
ಬ್ಯಾಂಕ್ ಗಳಲ್ಲಿ ಸರ್ಕಾರಿ ಪಾಲನ್ನು ಶೇ.50 ರಷ್ಟಕ್ಕಿಂತ ಕಡಿಮೆ ಮಾಡಬೇಕು, ಈ ಮೂಲಕ ಬ್ಯಾಂಕ್ ಗಳು ಕೇಂದ್ರ ವಿಜಿಲೆನ್ಸ್ ಆಯೋಗದ ಆತಂಕ ಇಲ್ಲದೇ ನಿರ್ಧಾರಗಳನ್ನು ಕೈಗೊಳ್ಳಬಹುದು ಎಂದು ಅಭಿಜಿತ್ ಬ್ಯಾನರ್ಜಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


