ರಾ, ಸೇನಾ ಕಚೇರಿಗಳ ಮೇಲೆ ದಾಳಿಗೆ ಉಗ್ರರ ಸಂಚು: ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ
ಪಾಕಿಸ್ತಾನ ಮೂಲದ ಜಮಾತ್ - ಉದ್- ದಾವಾ ಹಾಗೂ ಲಷ್ಕರ್-ಇ- ತೊಯ್ಬಾ(ಎಲ್ಇಟಿ) ಉಗ್ರ ಸಂಘಟನೆಗಳು ದೆಹಲಿಯಲ್ಲಿರುವ ಭಾರತೀಯ ಸೇನೆ ಮತ್ತು ರೀಸರ್ಚ್ ಅಂಡ್ ಅನಾಲಿಸಿಸ್ ವಿಂಗ್(ರಾ) ಕಚೇರಿಗಳ ಮೇಲೆ ದಾಳಿ ನಡೆಸಲು ಭಾರಿ ಸಂಚು ರೂಪಿಸಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ನವದೆಹಲಿ: ಪಾಕಿಸ್ತಾನ ಮೂಲದ ಜಮಾತ್ - ಉದ್- ದಾವಾ ಹಾಗೂ ಲಷ್ಕರ್-ಇ- ತೊಯ್ಬಾ(ಎಲ್ಇಟಿ) ಉಗ್ರ ಸಂಘಟನೆಗಳು ದೆಹಲಿಯಲ್ಲಿರುವ ಭಾರತೀಯ ಸೇನೆ ಮತ್ತು ರೀಸರ್ಚ್ ಅಂಡ್ ಅನಾಲಿಸಿಸ್ ವಿಂಗ್(ರಾ) ಕಚೇರಿಗಳ ಮೇಲೆ ದಾಳಿ ನಡೆಸಲು ಭಾರಿ ಸಂಚು ರೂಪಿಸಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನೇತೃತ್ವದ ಉಗ್ರ ಸಂಘಟನೆಗಳು ಭಾರತದಲ್ಲಿ ಭೀಕರ ದಾಳಿ ನಡೆಸಲು ಸಂಚು ರೂಪಿಸಿವೆ. ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಇತ್ತೀಚಿನ ಗುಪ್ತಚರ ಮಾಹಿತಿಯ ಪ್ರಕಾರ, ಅಕ್ಟೋಬರ್ ತಿಂಗಳ ಅಂತ್ಯದಲ್ಲಿ ಭಾರತೀಯ ಸೇನಾ ಮತ್ತು ರಾ ಕಚೇರಿಗಳ ಮೇಲೆ ದಾಳಿ ನಡೆಸಲು ಜಮಾತ್ - ಉದ್- ದಾವಾ ಹಾಗೂ ಲಷ್ಕರ್-ಇ- ತೊಯ್ಬಾ(ಎಲ್ಇಟಿ) ಉಗ್ರ ಸಂಘಟನೆಗಳು ಸಂಚು ರೂಪಿಸಿವೆ.
ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಇದರೊಂದಿಗೆ ಪೊಲೀಸ್ ಸಿಬ್ಬಂದಿ ವಾಸಿಸುವ ಸ್ಥಳಗಳು ಹಾಗೂ ಪೊಲೀಸ್ ಮತ್ತು ಅರೆ ಮಿಲಿಟರಿ ಪಡೆಗಳ ಕಚೇರಿಗಳ ಮೇಲೂ ದಾಳಿ ನಡೆಸಲು ಉಗ್ರರು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿ ಇದೆ.
ಫೈನಾನ್ಶಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್(ಎಫ್ಎಟಿಎಫ್)ನ ಏಷಿಯಾ ಪೆಸಿಪಿಕ್ ಗ್ರೂಪ್(ಎಪಿಜಿ)ನಲ್ಲಿ ಪಾಕಿಸ್ತಾನಕ್ಕೆ ಭಾರಿ ಮುಖಭಂಗ ಎದುರಾದ ಬಳಿಕ ಉಗ್ರರು ಈ ಸಂಚು ರೂಪಿಸಿರುವುದಾಗಿ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


