ಹರ್ಯಾಣ ವಿಧಾನಸಭೆ ಚುನಾವಣಾ ಫಲಿತಾಂಶ: ಕೈ-ಕಮಲ ಹಾವು-ಏಣಿ ಆಟ, ಬಿಜೆಪಿಗೆ ಅಲ್ಪ ಮುನ್ನಡೆ
ಹರ್ಯಾಣ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಲೆಕ್ಕಾಚಾರ ಉಲ್ಟಾಹೊಡೆದಿದ್ದು, ಬಿಜೆಪಿ ಮೈತ್ರಿಕೂಟಕ್ಕೆ ಕಾಂಗ್ರೆಸ್ ಮೈತ್ರಿಕೂಟ ತೀವ್ರ ಸ್ಪರ್ಧೆ ನೀಡುತ್ತಿದೆ.

ಚಂಡೀಘಡ: ಹರ್ಯಾಣ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಲೆಕ್ಕಾಚಾರ ಉಲ್ಟಾಹೊಡೆದಿದ್ದು, ಬಿಜೆಪಿ ಮೈತ್ರಿಕೂಟಕ್ಕೆ ಕಾಂಗ್ರೆಸ್ ಮೈತ್ರಿಕೂಟ ತೀವ್ರ ಸ್ಪರ್ಧೆ ನೀಡುತ್ತಿದೆ.
ಒಟ್ಟು 90 ಸದಸ್ಯ ಬಲದ ಹರ್ಯಾಣ ವಿಧಾನಸಭೆಯಲ್ಲಿ, ಪ್ರಸ್ತುತ ಲಭ್ಯವಿರುವ ಫಲಿತಾಂಶಗಳ ಅನ್ವಯ ಬಿಜೆಪಿ ಮೈತ್ರಿಕೂಟ 38 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ ಮೈತ್ರಿಕೂಟ 31 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಬಾರಿ ಹರ್ಯಾಣದಲ್ಲಿ ಇತರೆ ಪಕ್ಷಗಳು ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸುವ ಸಾಧ್ಯತೆ ಇದ್ದು, ಒಟ್ಟು 20 ಕ್ಷೇತ್ರಗಳಲ್ಲಿ ಇತರರು ಮುನ್ನಡೆಯಲ್ಲಿದ್ದಾರೆ.
ಇನ್ನು ಹರ್ಯಾಣದಲ್ಲಿ ದುಷ್ಯಂತ್ ಚೌಟಾಲಾ ಅವರ ಜನನಾಯಕ್ ಜನತಾ ಪಾರ್ಟಿ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆ ಇದ್ದು, ಅವರ ಪಕ್ಷ 11 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಹರ್ಯಾಣದಲ್ಲಿ ಸರ್ಕಾರ ರಚನೆಗೆ ಮ್ಯಾಜಿಕ್ ನಂಬರ್ 46 ಆಗಿದ್ದು, ಬಿಜೆಪಿ ಮೈತ್ರಿಕೂಟಕ್ಕೆ ಜೆಜೆಪಿ ಬೆಂಬಲ ನೀಡಿದರೆ ಸರ್ಕಾರ ರಚನೆ ಸಲೀಸಾಗಲಿದೆ. ಒಂದು ವೇಳೆ ಜೆಜೆಪಿ ಕಾಂಗ್ರೆಸ್ ಮೈತ್ರಿಕೂಟಕ್ಕೆ ಬೆಂಬಲ ನೀಡಿದರೆ, ಆಗ ಸರ್ಕಾರ ರಚನೆಗೆ ಕಾಂಗ್ರೆಸ್ ಪಕ್ಷಕ್ಕೆ ಇನ್ನೂ 4 ಸ್ಥಾನಗಳ ಕೊರತೆ ಎದುರಾಗಲಿದೆ.
Related Article
ನಾವು ಮತ್ತು ಮಹಾರಾಷ್ಟ್ರ ಜನತೆ ಆದಿತ್ಯ ಠಾಕ್ರೆ ಸಿಎಂ ಆಗಲು ಬಯಸುತ್ತೇವೆ: ಸಂಜಯ್ ರಾವತ್
'ಮಹಾ' ಫಲಿತಾಂಶ: ಸಂಭ್ರಮಾಚರಣೆಗೆ 5 ಸಾವಿರ ಲಡ್ಡು ತಯಾರಿಸಿದ ಬಿಜೆಪಿ ಕಾರ್ಯಕರ್ತರು
ಶಿವಸೇನೆ ಬೆಂಬಲವಿಲ್ಲದೇ ಬಿಜೆಪಿ ಸರ್ಕಾರ ರಚನೆ ಅಸಾಧ್ಯ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


