ದೇಶ

ಕೋರ್ಟ್'ನಲ್ಲಿದ್ದರೂ ಚುನಾವಣಾ ಫಲಿತಾಂಶ ತಿಳಿಯಲು ಹಾತೊರೆಯುತ್ತಿದ್ದ ಚಿದಂಬರಂ

ಐಎನ್ಎಕ್ಸ್ ಮೀಡಿಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗಿದ್ದರೂ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಅವರು, ಮಹಾರಾಷ್ಟ್ರ, ಹರಿಯಾಣ ಚುನಾವಣಾ ಫಲಿತಾಂಶ ತಿಳಿದುಕೊಳ್ಳಲು ಹಾತೊರೆಯುತ್ತಿದ್ದರು ಎಂದು ವರದಿಗಳಿಂದ ತಿಳಿದುಬಂದಿದೆ.

ಕೋರ್ಟ್'ನಲ್ಲಿದ್ದರೂ ಚುನಾವಣಾ ಫಲಿತಾಂಶ ತಿಳಿಯಲು ಹಾತೊರೆಯುತ್ತಿದ್ದ ಚಿದಂಬರಂ
ಚಿದಂಬರಂ
Published On :

ನವದೆಹಲಿ: ಐಎನ್ಎಕ್ಸ್ ಮೀಡಿಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗಿದ್ದರೂ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಅವರು, ಮಹಾರಾಷ್ಟ್ರ, ಹರಿಯಾಣ ಚುನಾವಣಾ ಫಲಿತಾಂಶ ತಿಳಿದುಕೊಳ್ಳಲು ಹಾತೊರೆಯುತ್ತಿದ್ದರು ಎಂದು ವರದಿಗಳಿಂದ ತಿಳಿದುಬಂದಿದೆ. 

ನ್ಯಾಯಾಲಯ ವಿಚಾರಣೆ ಮಗಿಯುತ್ತಿದ್ದಂತೆಯೇ ತಮ್ಮ ವಕೀಲರಿಗೆ ಕರೆ ಮಾಡಿದ ಚಿದಂಬರಂ ಅವರು ಚುನಾವಣಾ ಫಲಿತಾಂಶದ ಕುರಿತು ಮಾಹಿತಿ ಕೇಳಿದ್ದಾರೆ. 

ಈ ವೇಳೆ ಪ್ರತಿಕ್ರಿಯೆ ನೀಡಿರುವ ವಕೀಲರು, ಎರಡೂ ರಾಜ್ಯಗಳಲ್ಲೂ ಕಾಂಗ್ರೆಸ್ ಉತ್ತಮ ಫಲಿತಾಂಶದೊಂದೆ ಮುನ್ನಡೆ ಸಾಧಿಸುತ್ತಿದೆ ಎಂದು ಹೇಳಿದ್ದಾರೆ. ಇದಕ್ಕೆ ನಗುತ್ತಲೇ ಫೋನ್ ನೋಡುತ್ತಿದ್ದ ಚಿದಂಬರಂ ಅವರು ಮತ್ತಷ್ಟು ಮಾಹಿತಿ ಪಡೆದುಕೊಳ್ಳಲು ಮುಂದಾಗಿದ್ದರೆಂದು ತಿಳಿದುಬಂದಿದೆ. 

ಅಕ್ಟೋಬರ್ 21 ರಂದು ಎರಡೂ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆದಿದ್ದು, ನಿನ್ನೆಯಷ್ಟೇ ಫಲಿತಾಂಶ ಪ್ರಕಟಗೊಂಡಿದೆ. ಕಳೆದ ಬಾರಿಗೆ ಹೋಲಿಕೆ ಮಾಡಿದರೆ, ಈ ಬಾರಿ ಕಾಂಗ್ರೆಸ್ ನಲ್ಲಿ ಬೆಳವಣಿಗೆಗಳು ಕಂಡು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.