ಬಿಜೆಪಿ ಜೊತೆ ಕೈಜೋಡಿಸಿದರೆ ಸ್ವತಂತ್ರ ಶಾಸಕರಿಗೆ ಜನರು ಬೂಟ್ ನಲ್ಲಿ ಹೊಡೆಯುತ್ತಾರೆ: ಹೂಡಾ
ಹರಿಯಾಣದಲ್ಲಿ ಸ್ವತಂತ್ರ ಅಭ್ಯರ್ಥಿಗಳು ಬಿಜೆಪಿ ಜೊತೆಗೆ ಕೈಜೋಡಿಸಿದ್ದೇ ಆದರೆ, ಸಮಯ ಬಂದಾಗ ಜನರು ಬೂಟ್ ನಲ್ಲಿ ಹೊಡೆಯುತ್ತಾರೆಂದು ಕಾಂಗ್ರೆಸ್ ನಾಯಕ ದೀಪೇಂದರ್ ಸಿಂಗ್ ಹೂಡಾ ಶುಕ್ರವಾರ ಹೇಳಿದ್ದಾರೆ.

ಚಂಡೀಗಢ: ಹರಿಯಾಣದಲ್ಲಿ ಸ್ವತಂತ್ರ ಅಭ್ಯರ್ಥಿಗಳು ಬಿಜೆಪಿ ಜೊತೆಗೆ ಕೈಜೋಡಿಸಿದ್ದೇ ಆದರೆ, ಸಮಯ ಬಂದಾಗ ಜನರು ಬೂಟ್ ನಲ್ಲಿ ಹೊಡೆಯುತ್ತಾರೆಂದು ಕಾಂಗ್ರೆಸ್ ನಾಯಕ ದೀಪೇಂದರ್ ಸಿಂಗ್ ಹೂಡಾ ಶುಕ್ರವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಖಟ್ಟರ್ ಸರ್ಕಾರದ ಭಾಗವಾಗಲು ಹೋಗುವ ಸ್ವತಂತ್ರ ಶಾಸಕರು ತಮ್ಮದೇ ರಾಜಕೀಯ ಸಮಾಧಿಯನ್ನು ತೋಡಿಕೊಳ್ಳುತ್ತಾರೆ. ಜನರ ವಿಶ್ವಾಸವನ್ನು ಮಾರಿದಂತಾಗುತ್ತದೆ. ಇಂತಹ ಕಾರ್ಯಕ್ಕೆ ಕೈಹಾಕುವ ನಾಯಕರನ್ನು ಜನರು ಎಂದಿಗೂ ಮರೆಯುವುದಿಲ್ಲ. ಸಮಯ ಬಂದಾಗ ಬೂಟ್ ನಲ್ಲಿ ಹೊಡೆಯುತ್ತಾರೆಂದು ಹೇಳಿದ್ದಾರೆ.
ಹರಿಯಾಣ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ 40 ಸ್ಥಾನವನ್ನು ಗೆದ್ದಿದ್ದರೆ, ಕಾಂಗ್ರೆಸ್ 31 ಸ್ಥಾನಗಳನ್ನು ಗೆದ್ದಿದೆ. ಇನ್ನು ದುಶ್ಯಂತ್ ಚೌಟಾಲಾ ಅವರ ಜೆಜೆಪಿ ಪಕ್ಷ 10 ಸ್ಥಾನಗಳನ್ನು ಗೆದ್ದುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


