ಅಕ್ಟೋಬರ್ 27ಕ್ಕೆ ಪ್ರಧಾನಿ ಮೋದಿ 'ಮನ್ ಕಿ ಬಾತ್'
ಪ್ರಧಾನಿ ನರೇಂದ್ರ ಮೋದಿ ಅವರ ಆಕಾಶವಾಣಿಯ ತಿಂಗಳ ಜನಪ್ರಿಯ ಕಾರ್ಯಕ್ರಮ "ಮನ್ ಕಿ ಬಾತ್' ಇದೇ 27ರಂದು ಮೂಡಿಬರಲಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆಕಾಶವಾಣಿಯ ತಿಂಗಳ ಜನಪ್ರಿಯ ಕಾರ್ಯಕ್ರಮ "ಮನ್ ಕಿ ಬಾತ್' ಇದೇ 27ರಂದು ಮೂಡಿಬರಲಿದೆ.
ಭಾನುವಾರ ಬೆಳಗ್ಗೆ 11 ಗಂಟೆಗೆ ಪ್ರಧಾನಿ ದೇಶ-ವಿದೇಶದ ಭಾರತೀಯರೊಂದಿಗೆ ತಮ್ಮ ಚಿಂತನೆ ಹಂಚಿಕೊಳ್ಳಲಿದ್ದಾರೆ.
ದೀಪಾವಳಿಯ ದಿನವಾದ ಭಾನುವಾರ ಬೆಳಿಗ್ಗೆ 11 ಗಂಟೆಗೆ ಆಕಾಶವಾಣಿಯಲ್ಲಿ ತಮ್ಮ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಚಿಂತನೆಗಳನ್ನು ಹಂಚಿಕೊಳ್ಳಲಿದ್ದಾರೆ. ಇದು ಮನ್ ಕಿ ಬಾತ್ ಅವರ 58 ನೇ ಆವೃತ್ತಿಯಾಗಿದೆ.
ಇದು ಆಕಾಶವಾಣಿ ಮತ್ತು ದೂರದರ್ಶನದ ಎಲ್ಲಾ ವಾಹಿನಿಗಳಲ್ಲಿ ಮತ್ತು ಏರ್ ನ್ಯೂಸ್ ವೆಬ್‌ಸೈಟ್ www.newsonair.com ಮತ್ತು 'ನ್ಯೂಸ್ ಏರ್ ಮೊಬೈಲ್ ಅಪ್ಲಿಕೇಶನ್' ನಲ್ಲಿ ಪ್ರಸಾರವಾಗಲಿದೆ. ಇದು ಪ್ರಧಾನಿ ಕಚೇರಿ, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಆಕಾಶವಾಣಿ ಮತ್ತು ಡಿಡಿ ನ್ಯೂಸ್‌ನ ಯೂಟ್ಯೂಬ್ ಚಾನೆಲ್‌ಗಳಲ್ಲಿ ನೇರ ಪ್ರಸಾರವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


