ರಾಜಕೀಯ ಮುಗಿಯಿತು ಎಂದವರಿಗೆ ಫಲಿತಾಂಶ ತಕ್ಕ ಪಾಠ ಕಲಿಸಿದೆ: ಶರದ್ ಪವಾರ್
ಗುರುವಾರ ಹೊರಬಿದ್ದ ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶ ಹಲವು ಅಚ್ಚರಿಗೆ ಕಾರಣವಾಗಿದೆ. ಶರದ್ ಪವಾರ್ ನೇತೃತ್ವದ ಎನ್ ಸಿಪಿ 62 ಸ್ಥಾನಗಳನ್ನು ಗೆದ್ದುಕೊಂಡಿದೆ.

ಮುಂಬೈ: ಗುರುವಾರ ಹೊರಬಿದ್ದ ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶ ಹಲವು ಅಚ್ಚರಿಗೆ ಕಾರಣವಾಗಿದೆ. ಶರದ್ ಪವಾರ್ ನೇತೃತ್ವದ ಎನ್ ಸಿಪಿ 62 ಸ್ಥಾನಗಳನ್ನು ಗೆದ್ದುಕೊಂಡಿದೆ.
220 ಕ್ಷೇತ್ರಗಳನ್ನು ಗೆಲ್ಲುವ ಗುರಿ ಹಾಕಿಕೊಂಡಿದ್ದ ಬಿಜೆಪಿ ಶಿವಸೇನೆ ಮೈತ್ರಿ 162 ಸ್ಥಾನಗಳನ್ನಷ್ಟೇ ಪಡೆಯಲು ಶಕ್ತವಾಗಿದೆ. ಅಚ್ಚರಿ ಎಂಬಂತೆ ಶರದ್ ಪವಾರ್ ಮತ್ತೆ ಪುಟಿದೆದ್ದಿದ್ದಾರೆ, ಇದರ ಪರಿಣಾಮ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಹೆಚ್ಚಾಗಿವೆ.
ಫಲಿತಾಂಶದ ನಂತರ ಮಾತನಾಡಿದ ಶರದ್ ಪವಾರ್, ನನ್ನ ರಾಜಕೀಯ ಜೀವನ ಮುಗಿಯಿತು ಎಂದು ಕೊಂಡವರಿಗೆ ಈ ಚುನಾವಣಾ ಫಲಿತಾಂಶ ಸರಿಯಾದ ಪಾಠ ಕಲಿಸಿದೆ ಜೊತೆಗೆ ಉತ್ತರ ನೀಡಿದೆ ಎಂದೂ ಹೇಳಿದ್ದಾರೆ.
ಕೆಲವರು ಮಿತಿ ಮೀರಿ ನಡೆದುಕೊಂಡರು. ಅಧಿಕಾರ ದುರ್ಬಳಕೆ ಮಾಡಿಕೊಂಡರು. ಅಲ್ಲದೆ ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸಿದವರಿಗೆ ರಾಜ್ಯದ ಜನರೇ ಸರಿಯಾದ ಉತ್ತರ ನೀಡಿದ್ದಾರೆ. ಈ ಚುನಾವಣೆಯೊಂದಿಗೆ ನನ್ನ ರಾಜಕೀಯ ಜೀವನ ಅಂತ್ಯವಾಯಿತು ಎಂದವರಿಗೆ ಜನರೇ ಬುದ್ದಿ ಕಲಿಸಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಜನರು ಬಿಜೆಪಿ- ಶಿವಸೇನೆಯ 220 ಸೀಟ್ ಗೆಲ್ಲುವ ಕನಸಿಗೆ ತಣ್ಣೀರು ಎರಚಿದ್ದಾರೆ. ಅಧಿಕಾರದ ದುರಹಂಕಾರ ಜನರಿಗೆ ಇಷ್ಟವಾಗಿಲ್ಲ ಎಂದು ಕೇಸರಿ ಮೈತ್ರಿಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈಗಾಗಲೇ ಪ್ರಕಟವಾದ ಫಲಿತಾಂಶದಲ್ಲಿ ಬಿಜೆಪಿ- ಶಿವಸೇನೆ ಮೈತ್ರಿ 162 ಸ್ಥಾನ ಗೆದ್ದು ಬಹುಮತ ಪಡೆದಿದ್ದರೆ, ಕಾಂಗ್ರೆಸ್ -ಎನ್ ಸಿಪಿ ಮೈತ್ರಿ 104 ಸ್ಥಾನ ಗೆದ್ದುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


