ಹರ್ಯಾಣ: ಮುಖ್ಯಮಂತ್ರಿ ಆಗಿ 2 ನೇ ಅವಧಿಗೆ ಮನೋಹರ ಲಾಲ್ ಖಟ್ಟರ್ ಪ್ರಮಾಣ ವಚನ ಸ್ವೀಕಾರ
ಹರ್ಯಾಣದ ಮುಖ್ಯಮಂತ್ರಿ ಆಗಿ 2ನೇ ಅವಧಿಗೆ ಮನೋಹರ ಲಾಲ್ ಖಟ್ಟರ್ ಹಾಗೂ ಉಪಮುಖ್ಯಮಂತ್ರಿಯಾಗಿ ಜನ ನಾಯಕ್ ಜನತಾ ಪಕ್ಷದ ದುಷ್ಯಂತ್ ಚೌಟಾಲ ಇಂದು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಚಂಢೀಗಡ: ಹರ್ಯಾಣದ ಮುಖ್ಯಮಂತ್ರಿ ಆಗಿ 2ನೇ ಅವಧಿಗೆ ಮನೋಹರ ಲಾಲ್ ಖಟ್ಟರ್ ಹಾಗೂ ಉಪಮುಖ್ಯಮಂತ್ರಿಯಾಗಿ ಜನ ನಾಯಕ್ ಜನತಾ ಪಕ್ಷದ ದುಷ್ಯಂತ್ ಚೌಟಾಲ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದಾರೆ
ರಾಜಭವನದಲ್ಲಿ ಇಂದು ನಡೆದ ಸರಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮನೋಹರ ಲಾಲ್ ಖಟ್ಟರ್ ಹಾಗೂ ದುಷ್ಯಂತ್ ಚೌಟಾಲ ಅವರಿಗೆ ಹರ್ಯಾಣ ಗವರ್ನರ್ ಸತ್ಯದೇವ್ ನಾರಾಯಣ ಆರ್ಯ ಪ್ರಮಾಣ ವಚನ ಬೋಧಿಸಿದರು.
ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ. ಪಿ. ನಡ್ಡಾ, ಶಿರೋಮಣಿ ಅಕಾಲಿ ದಳ ಮುಖಂಡ ಪ್ರಕಾಶ್ ಸಿಂಗ್ ಬಾದಲ್ ಮತ್ತಿತರರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಈ ಮೂಲಕ ಹರ್ಯಾಣದಲ್ಲಿ ಬಿಜೆಪಿ ಹಾಗೂ ಜೆಜೆಪಿ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಯಿತು.
90 ಸದಸ್ಯ ಬಲದ ಹರ್ಯಾಣ ವಿಧಾನಸಭೆಗೆ ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಸ್ವತಂತ್ರವಾಗಿ ಸರ್ಕಾರ ರಚನೆಗೆ ಆರು ಸ್ಥಾನಗಳ ಕೊರತೆ ಇತ್ತು. ಇದರಿಂದಾಗಿ ಆರು ಪಕ್ಷೇತರರು ಸೇರಿದಂತೆ ಜೆಜೆಪಿಯೊಂದಿಗೆ ಸೇರಿ ಸರ್ಕಾರ ರಚನೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


