ದೇಶ

ದೇಶದಾದ್ಯಂತ ದೀಪಾವಳಿ ಸಂಭ್ರಮ: ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ

ದೇಶದಾದ್ಯಂತ ಬೆಳಕಿನಹಬ್ಬ ದೀಪಾವಳಿಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ದೇಶದ ಜನತೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ಮೋದಿಯವರು ಭಾನುವಾರ ಶುಭಾಶಯಗಳನ್ನು ಕೋರಿದ್ದಾರೆ.

ದೇಶದಾದ್ಯಂತ ದೀಪಾವಳಿ ಸಂಭ್ರಮ: ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ
ರಾಷ್ಟ್ರಪತಿ ಕೋವಿಂದ್ ಹಾಗೂ ಪ್ರಧಾನಿ ಮೋದಿ
Published On :

ನವದೆಹಲಿ: ದೇಶದಾದ್ಯಂತ ಬೆಳಕಿನಹಬ್ಬ ದೀಪಾವಳಿಯನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ದೇಶದ ಜನತೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ಮೋದಿಯವರು ಭಾನುವಾರ ಶುಭಾಶಯಗಳನ್ನು ಕೋರಿದ್ದಾರೆ. 

ದೀಪಾವಳಿ ಎಂದು ಕರೆಯಲ್ಪಡುವ ದೀಪಾವಳಿ ಭಾರತದ ಅತ್ಯಂತ ಪ್ರಸಿದ್ಧ ಹಬ್ಬಗಳಲ್ಲಿ ಒಂದಾಗಿದೆ. ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು. ಪ್ರೀತಿ, ಕಾಳಜಿ ಹಾಗೂ ಹಂಚಿಕೆಯ ದೀಪವನ್ನು ಬೆಳಗಿಸುವ ಮೂಲಕ ನಿರ್ಗತಿಕರ ಜೀವನದಲ್ಲಿ ಸಂತೋಷವನ್ನು ತರೋಣ ಎಂದು ಹೇಳಿದ್ದಾರೆ. 

ಇದರಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯಗಳನ್ನು ಕೋರಿದ್ದು, ದೀಪಾವಳಿಯ ಶುಭ ಸಂದರ್ಭದಲ್ಲಿ ಜನತೆಗೆ ಶುಭಾಶಯಗಳನ್ನು ಕೋರುತ್ತಿದ್ದೇನೆ. ದೀಪಗಳ ಈ ಹಬ್ಬವು ನಮ್ಮೆಲ್ಲರ ಜೀವನದಲ್ಲಿ ಹೊಸ ಬೆಳಕು ತರಲಿ ಮತ್ತು ನಮ್ಮ ದೇಶ ಸದಾಕಾಲ ಸಂತೋಷ, ಸಮೃದ್ಧಿ ಹಾಗೂ ಅದೃಷ್ಟದಿಂದ ಬೆಳಗಲಿ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.